‘ಪೊಲೀಸ್ ನೇಮಕಾತಿ ವಿಭಾಗ’ದ ನಾಲ್ವರು ಅಧಿಕಾರಿಗಳು, ಇಬ್ಬರು ಮಧ್ಯವರ್ತಿಗಳು ಸಿಐಡಿ ಬಲೆಗೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ಪೊಲೀಸ್ ನೇಮಕಾತಿ ವಿಭಾಗಕ್ಕೂ ಲಗ್ಗೆ ಇಟ್ಟಿದ್ದಾರೆ. ನೇಮಕಾತಿ ವಿಭಾಗದಿಂದಲೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರೋದು ಖಚಿತಗೊಂಡ ಕಾರಣ, ವಿಭಾಗದ ನಾಲ್ವರು ಅಧಿಕಾರಿಗಳು ಹಾಗೂ ಇಬ್ಬರು ಮಧ್ಯವರ್ತಿಗಳು ಸೇರಿ ಆರು ಮಂದಿ ಸಿಐಡಿ ಬಲೆಗೆ ಮಂಗಳವಾರ ಬಿದ್ದಿದ್ದಾರೆ.
ಪೊಲೀಸ್ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಹರ್ಷ, ಸಶಸ್ತ್ರ ಮೀಸಲು ಪಡೆಯ ಎಸ್ಐ ಶ್ರೀನಿವಾಸ್, ಹೆಡ್ ಕಾನ್ ಸ್ಟೇಬಲ್ ಲೋಕೇಶ್, ದ್ವಿತೀಯ ದರ್ಜೆ ಸಹಾಯಕ ಶ್ರೀಧರ್ ಸೇರಿದಂತೆ ಮಧ್ಯವರ್ತಿಗಳಾದ ಮಂಜುನಾಖ್, ಶರತ್ ಎಂಬಾತನನ್ನು ಬಂಧಿಸಿದೆ.
ಇನ್ನೂ ನೇಮಕಾತಿ ವಿಭಾಗದ ಸ್ಟ್ರಾಂಗ್ ರೂಂನಲ್ಲಿದ್ದ ಕೆಲ ಅಭ್ಯರ್ಥಿಗಳ ಒಎಂಆರ್ ಶೀಟ್ ಗಳನ್ನು ಈ ಆರೋಪಿಗಳು ತಿದಿದ್ದಾರೆ. ಇದಕ್ಕೆ ತಲಾ ಅಭ್ಯರ್ಥಿಗಳಿಂದ 30 ರಿಂದ 40 ಲಕ್ಷ ರೂ ವಸೂಲಿ ಮಾಡಿದ್ದಾರೆ ಎಂಬ ಸ್ಪೋಟಕ ಮಾಹಿತಿಯನ್ನು ಸಿಐಡಿ ಮುಂದೆ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದೆ. ಈ ಮೂಲಕ ಪೊಲೀಸ್ ನೇಮಕಾತಿ ಹಗರಣದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ.