fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಇಂದಿನಿಂದಲೇ ಮಾದರಿ ನೀತಿಸಂಹಿತೆ ಜಾರಿ: ಡಿಸಿ ನಿತೇಶ್ ಪಾಟೀಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬಂದಿರುತ್ತದೆ. ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸರಕಾರದ ಹೊಸ ಯೋಜನೆ/ಕಾರ್ಯಕ್ರಮ ಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಲಿದೆ. ಚುನಾವಣಾ ಪ್ರಚಾರ ಸಭೆ, ವಾಹನ ಬಳಕೆ ಸೇರಿದಂತೆ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ಪ್ರಚಾರ ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ವಿಧಾನಸಭೆ/ಲೋಕಸಭೆ ಚುನಾವಣೆ ರೀತಿಯಲ್ಲಿ ಮಾದರಿ ನೀತಿಸಂಹಿತೆ ಇರಲಿದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳು ಮಾದರಿ ನೀತಿಸಂಹಿತೆಯನ್ನು ಪಾಲಿಸಬೇಕು ಎಂದು ಹೇಳಿದರು. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ನಿಗದಿತ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಈ ಚುನಾವಣಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದರು.

ಚುನಾವಣಾ ವೇಳಾಪಟ್ಟಿ ಪ್ರಕಟ:
ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುತ್ತದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ಜೂನ್ 15 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು. ಮೇ 19 ರಂದು ಅಧಿಸೂಚನೆ ಪ್ರಕಟಿಸಲಾಗುವುದು; ನಾಮಪತ್ರ ಸಲ್ಲಿಕೆಗೆ ಮೇ 26 ಕಡೆಯ ದಿನವಾಗಿರುತ್ತದೆ; ನಾಮಪತ್ರಗಳ ಪರಿಶೀಲನೆ ಮೇ 27 ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನವಾಗಿದ್ದು, ಒಟ್ಟಾರೆ ಚುನಾವಣಾ ಪ್ರಕ್ರಿಯೆಯು ಜೂನ್ 17 ರಂದು ಮುಕ್ತಾಯವಾಗಲಿದೆ.

ಮತಗಟ್ಟೆಗಳ ಕರಡು ಪಟ್ಟಿ ಪ್ರಕಟ:
ಈಗಾಗಲೇ ಜಿಲ್ಲೆಯ ಮತಗಟ್ಟೆಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನಾಲ್ಕು ಉಪ ಮತಗಟ್ಟೆಗಳು ಸೇರಿದಂತೆ ಒಟ್ಟು 82 ಮತಗಟ್ಟೆಗಳನ್ನು ಗುರುತಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಜಿಲ್ಲೆಯಲ್ಲಿ ದಿನಾಂಕ 9-5-2022 ರಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 43,798 ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 13,572 ಮತದಾರರಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ ಹತ್ತು ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ನಿಗದಿತ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಈ ಚುನಾವಣಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ಪಷ್ಟಪಡಿಸಿದರು.

ಚುನಾವಣಾ ವೇಳಾಪಟ್ಟಿ ಪ್ರಕಟ:
ವಿಧಾನ ಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುತ್ತದೆ. ಜೂನ್ 13 ರಂದು ಮತದಾನ ನಡೆಯಲಿದ್ದು, ಜೂನ್ 15 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದರು.
ಮೇ 19 ರಂದು ಅಧಿಸೂಚನೆ ಪ್ರಕಟಿಸಲಾಗುವುದು; ನಾಮಪತ್ರ ಸಲ್ಲಿಕೆಗೆ ಮೇ 26 ಕಡೆಯ ದಿನವಾಗಿರುತ್ತದೆ; ನಾಮಪತ್ರಗಳ ಪರಿಶೀಲನೆ ಮೇ 27 ರಂದು ನಡೆಯಲಿದೆ.
ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನವಾಗಿದ್ದು, ಒಟ್ಟಾರೆ ಚುನಾವಣಾ ಪ್ರಕ್ರಿಯೆಯು ಜೂನ್ 17 ರಂದು ಮುಕ್ತಾಯವಾಗಲಿದೆ.

ಮತಗಟ್ಟೆಗಳ ಕರಡು ಪಟ್ಟಿ ಪ್ರಕಟ:
ಈಗಾಗಲೇ ಜಿಲ್ಲೆಯ ಮತಗಟ್ಟೆಗಳ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ನಾಲ್ಕು ಉಪ ಮತಗಟ್ಟೆಗಳು ಸೇರಿದಂತೆ ಒಟ್ಟು 82 ಮತಗಟ್ಟೆಗಳನ್ನು ಗುರುತಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಜಿಲ್ಲೆಯಲ್ಲಿ ದಿನಾಂಕ 9-5-2022 ರಂತೆ ಪದವೀಧರ ಕ್ಷೇತ್ರದಲ್ಲಿ ಒಟ್ಟು 43,798 ಮತದಾರರು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 13,572 ಮತದಾರರಿದ್ದಾರೆ.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಅಭಯ್ ಅವಲಕ್ಕಿ,ರಾಜು ಕೋಪರಿ, ವಿ.ಬಿ.ರೇವಡಿ, ಕೆ.ಜಿ.ಪಾಟೀಲ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: