Karnataka News
ಬಿಜೆಪಿ ಹೈಕಮಾಂಡ್ಗೆ 20 ಜನರ ಹೆಸರು ಶಿಫಾರಸು-ಬಿಜೆಪಿ ಮುಖಂಡ ಲಕ್ಷ್ಮಣ ಸವದಿ

ಹೊಸಪೇಟೆ (ವಿಜಯನಗರ): ‘ವಿಧಾನ ಪರಿಷತ್ ಚುನಾವಣೆಗೆ ನನ್ನ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಜನರ ಹೆಸರಿನ ಪಟ್ಟಿ ಅಂತಿಮಗೊಳಿಸಿ, ಹೈಕಮಾಂಡ್ಗೆ ಶಿಫಾರಸು ಮಾಡಲಾಗಿದೆ. ನಾವು ಪಕ್ಷದ ಶಿಸ್ತಿನ ಶಿಪಾಯಿಗಳು.
ಪಕ್ಷದ ವರಿಷ್ಠರು ಕೈಗೊಳ್ಳುವ ಯಾವುದೇ ತೀರ್ಮಾನವನ್ನು ನಾವು ಸಂತೋಷದಿಂದ ಸ್ವೀಕರಿಸುತ್ತೇವೆ’ ಎಂದು ಬಿಜೆಪಿ ಮುಖಂಡ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಭಾನುವಾರ ಜ್ಯೋತಿ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರನ್ನೂ ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ರಾಷ್ಟ್ರೀಯ ನಾಯಕರು ಕೂಲಂಕಷವಾಗಿ ಪರಿಶೀಲಿಸಿದ ನಂತರ ತೀರ್ಮಾನಕ್ಕೆ ಬರುತ್ತಾರೆ ಎಂದರು.