fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationKarnataka News

BIGG NEWS : ರಾಜ್ಯದಾದ್ಯಂತ ಇಂದಿನಿಂದ ಶಾಲೆಗಳು ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು : ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಲಿದ್ದು ( School Start ), ಶಿಕ್ಷಣ ಇಲಾಖೆ ( Education Department ) ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.

 

ಎರಡು ವರ್ಷಗಳ ಕೊರೊನಾ ಅಲೆಯಲ್ಲಾದ ಕಲಿಕೆ ನಷ್ಟ ತುಂಬುವ ಹಿನ್ನೆಲೆಯಲ್ಲಿ 15 ದಿನ ಮುಂಚಿತವಾಗಿ ಶಿಕ್ಷಣ ಇಲಾಖೆ ಶಾಲೆಗಳನ್ನು ಪ್ರಾರಂಭ ಮಾಡುತ್ತಿದೆ.

ಈ 15 ದಿನ ಕಾಮನಬಿಲ್ಲು ಮತ್ತು ಕಲಿಕಾ ಚೇತರಿಕೆ ಅನ್ನೋ ವಿಶೇಷ ಕಾರ್ಯಕ್ರಮಗಳನ್ನು 1 ರಿಂದ 10 ನೇ ತರಗತಿಗಳಿಗೆ ಅನುಷ್ಠಾನ ಮಾಡಲಾಗುತ್ತಿದೆ.

ಶಾಲೆಗಳ ಪ್ರಾರಂಭೋತ್ಸವ ಹಬ್ಬದ ರೀತಿ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಲು ನಿರ್ಧರಿಸಲಾಗಿದೆ. ಶಾಲೆಗಳಿಗೆ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಮಕ್ಕಳನ್ನು ಸ್ವಾಗತಿಸಬೇಕು. ಹಾಜರಾತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕಾಗಿ ಶಿಕ್ಷಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

 

ಶಾಲಾರಂಭಕ್ಕೆ ಸಿಎಂ ಬೊಮ್ಮಾಯಿ ಚಾಲನೆ

2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 12.30 ಕ್ಕೆ ತುಮಕೂರಿನ ಎಂಪ್ರೆಸ್ ಪಬ್ಬಕ್ ಶಾಲೆಯಲ್ಲಿ ಚಾಲನೆ ನೀಡಲಿದ್ದಾರೆ.

ಬಿಸಿಯೂಟ ಪ್ರಾರಂಭ

ಇಂದಿನಿಂದ ಶಾಲೆಗಳು ಆರಂಭವಾಗಲಿದ್ದು, ಮಕಕ್ಳಿಗೆ ಮಧ್ಯಾಹ್ನದ ಬಿಸಿಯೂಟ ಯೊಜನೆಯೂ ಆರಂಭವಾಗಲಿದೆ. ಬಿಸಿಯೂಟದಲ್ಲಿ ಮೊದಲ ದಿನ ಸಿಹಿ ಊಟ ತಯಾರಿಸಿ ಬಡಿಸಬೇಕು. ಇದಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ಹಳೆ ಬಸ್ ಪಾಸ್ ಬಳಕೆಗೆ ಸಮ್ಮತಿ

ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ರಾಜ್ಯಾಧ್ಯಂತ ಆರಂಭಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲೆಗಳಿಗೆ ತೆರಳಲು ಈ ಹಿಂದೆ ಕೆ ಎಸ್ ಆರ್ ಟಿ ಸಿ ( KSRTC ) ಮತ್ತು ಬಿಎಂಟಿಸಿ (BMTC) ನೀಡಿರುವಂತ ವಿದ್ಯಾರ್ಥಿ ಬಸ್ ಪಾಸ್ ( Student Bus Pass ) ತೋರಿಸಿಕೊಂಡು, ತನ್ನ ನಿಗಮದ ಬಸ್ ಗಳಲ್ಲಿ ಸಂಚರಿಸಬಹುದು. ಕಳೆದ ಶೈಕ್ಷಣಿಕ ವರ್ಷದ ಬಸ್ ಪಾಸ್ ಜೂನ್ ಅಂತ್ಯದವರೆಗೂ ಮಾನ್ಯತೆ ಇರಲಿದೆ. 2022-23 ನೇ ಸಾಲಿನ ಪಾಸ್ ಗಳ ವಿತರಣೆ ದಿನಾಂಕ ಶೀಘ್ರವೇ ತಿಳಿಸುವುದಾಗಿ ಕೆಎಸ್ ಆರ್ ಟಿಸಿ ತಿಳಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: