Karnataka News
BREAKING: ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮಗಳಲ್ಲಿ ಲಘು ಭೂಕಂಪ, ಮನೆಯಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ. ರಾತ್ರಿ 9.30 ರಿಂದ 9.45 ರ ವರೆಗೆ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
ರಾತ್ರಿ ವೇಳೆ ಆದ ಭೂಕಂಪದ ಅನುಭವದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಆತಂಕದಿಂದ ಮನೆಗಳಿಂದ ಹೊರಗೆ ಓಡಿ ಬಂದ ಗ್ರಾಮಸ್ಥರು ತಮಗೆ ಆದ ಅನುಭವ ಹಂಚಿಕೊಂಡಿದ್ದಾರೆ. ಕದಿರನ್ನಗಾರಿಪಲ್ಲಿ, ಪೆದ್ದತುಮಕೆಪಲ್ಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.