fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

BIGG NEWS: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ, ಕಾಯ್ದೆಯಲ್ಲಿ ಏನಿದೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

 

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ) ಕಾಯ್ದೆಯ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅಂಕಿತ ಹಾಕಿದ್ದಾರೆ.‌ ಈ ಮೂಲಕ ಮತಾಂತರ ನಿಷೇಧ ಮಸೂದೆ‌ ರಾಜ್ಯದಲ್ಲಿ ಕಾಯ್ದೆಯಾಗಿ ಜಾರಿಗೊಂಡಿದೆ.

 

ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಇದಕ್ಕೆ ರಾಜ್ಯಪಾಲರು ಮಂಗಳವಾರ ಅಂಕಿತ ಹಾಕಿದ್ದಾರೆ.‌ ಕೆಲ ಸಂಘಟನೆಗಳು ಹಾಗೂ ಕ್ರೈಸ್ತ ಸಮುದಾಯದ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿದೆ.

ಮತಾಂತರ ನಿಷೇಧ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಬಿಜೆಪಿ ಸರಕಾರ ಇತ್ತೀಚೆಗೆ ಸಂಪುಟದಲ್ಲಿ ನಿರ್ಧರಿಸಿತ್ತು. ಮತಾಂತರ ನಿಷೇಧ ಕಾಯಿದೆ ಯಾವ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ, ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ. ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು. ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿದ ಸಚಿವರು, ಸಮಾಜದಲ್ಲಿ ಶಾಂತಿ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ತಿದ್ದುಪಡಿ ಮಸೂದೆ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚಿಸಲಾಗಿದೆ. ಶಾಸಕರೊಬ್ಬರು ಮತಾಂತರ ಹಾವಳಿ ಸೃಷ್ಟಿಸಿದ ಕುಟುಂಬಗಳ ನಡುವಿನ ಘರ್ಷಣೆಗಳ ಕುರಿತೂ ಪ್ರಸ್ತಾಪಿಸಿದ್ದನ್ನೂ ನೆನಪಿಸಿದ ಸಚಿವರು, ಸುಗ್ರೀವಾಜ್ಞೆಗೆ ಸಮ್ಮತಿ ಸಿಕ್ಕಿದ ನಂತರ, ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುವುದು ಎಂದು ಸಚಿವರು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ಆಮಿಷ, ಬಲವಂತ, ವಂಚನೆ ಸಾಧನಗಳ ಮೂಲಕ ಮತಾಂತರ, ಸಾಮೂಹಿಕ ಮತಾಂತರದ ಅನೇಕ ಘಟನೆಗಳಿಗೆ ರಾಜ್ಯವು ಸಾಕ್ಷಿಯಾಗಿದೆ. ಇದು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದಿದ್ದು, ಇದನ್ನು ತಡೆಗಟ್ಟಲು ಕಾಯ್ದೆಗೆ ಬಲ ನೀಡಲಾಗಿದೆ. ಇನ್ಮುಂದೆ ಬಲವಂತದ ಮತಾಂತರ ಮಾಡಿದ್ರೇ, ಕನಿಷ್ಠ ಹತ್ತು ವರ್ಷ ಜೈಲು ಶಿಕ್ಷ ವಿಧಿಸೋದಕ್ಕೆ ಕಾನೂನಿನಲ್ಲಿ ಅವಕಾಶ ನೀಡಲಾಗಿದೆ ಎಂದರು.

ಹಾಗಾದ್ರೇ.. ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂರಕ್ಷಣಾ ಕಾಯ್ದೆಯಲ್ಲಿ ಏನೆಲ್ಲಾ ಅಂಶಗಳಿವೆ ಎನ್ನುವ ಸಂಪೂರ್ಣ ಮಾಹಿತಿ, ಈ ಕೆಳಗಿನ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಯಬಹುದಾಗಿದೆ.

          

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: