ಬೆಂಗಳೂರು: ಇಂದು ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
2 ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯ ಸ್ಥಾನ ಹಾಗೂ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯವರು ರಾಜೀನಾಮೆ ನೀಡಿದ್ದರು.
ಇಂದು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಮುಖ್ಯಮಂತ್ರಿ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.