
ಬೆಳಗಾವಿ : ಜಮೀನಿಗೆ ಸೇರಿದ ಜೆ ಪಾರಂಗೆ ರಾಯಬಾಗ ತಹಶೀಲ್ದಾರ ಕಚೇರಿಯಿಂದ ಸಹಿ ಪಡೆದು ವರದಿ ಸಲ್ಲಿಸಲು ಲಂಚ ಪಡೆದುಕಳ್ಳುತ್ತಿದ್ದ ವೇಳೆಯಲ್ಲಿ ಚಿಂಚಲಿ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ಕಿತ್ತೂರ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಮೇ. 18 ರಂದು ಗ್ರಾಮದ ಸಚಿನ್ ಶಿಂಧೆ ಅವರಿಂದ 5 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳುತ್ತಿದ್ದ ವೇಳೆ ಬೆಳಗಾವಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಆಪಾದಿತರನ್ನು ದಸ್ತಗೀರ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸಲಾಗಿದೆ.
ದಾಳಿಯಲ್ಲಿ ಬೆಳಗಾವಿ ಉತ್ತರ ವಲಯದ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಾದ ಬಿ.ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ದೂರನ್ನು ಜೆ.ಎಮ್. ಕರುಣಾಕರ ಶೆಟ್ಟಿ, ಪೊಲೀಸ್ ಉಪಾಧೀಕ್ಷಕರವರು ದಾಖಲಿಸಿಕೊಂಡಿರುತ್ತಾರೆ. ಹಾಗೂ ಕಾರ್ಯಾಚರಣೆಯಲ್ಲಿ ನಿರಂಜನ್ ಎಂ. ಪಾಟೀಲ್, ಪೊಲೀಸ್ ನಿರೀಕ್ಷಕರು ಹಾಗೂ ಬೆಳಗಾವಿ ಎಸಿಬಿ ಠಾಣೆಯ ಸಿಬ್ಬಂದಿಗಳು ತೊಡಗಿದ್ದರು.