ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹಿನ್ನೆಲೆ ಬೆಳಗಾವಿಯಲ್ಲಿ ಎಸ್ಡಿಪಿಐ ಸಂಘಟನೆಯಿಂದ ಪ್ರತಿಭಟನೆ

ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶವನ್ನು ನಾವು ಒಪ್ಪುವುದಿಲ್ಲ ಎಂದು ಬೆಳಗಾವಿಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.
ಹೌದು ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ನಗರದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ನ್ಯಾಯಾಲಯ ಆದೇಶವನ್ನು ನೀಡಿದ್ದು ನಾವು ಅದನ್ನು ಒಪ್ಪುವುದಿಲ್ಲ. ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಇಲ್ಲಾ. ಶಿವಲಿಂಗ ಅಂತಾ ಹೇಳ್ತಿರೋದು ನೀರಿನ ಫೌಂಟೇನ್. ಇದು ಬಿಜೆಪಿ, ಆರ.ಎಸ.ಎಸ ಕುತಂತ್ರವಾಗಿದೆ. ಎಂದು ಆಕ್ರೋಶವನ್ನು ವ್ಯಕ್ತಪಡಿಸಿ ಬೆಳಗಾವಿ ಡಿಸಿ ಮನವಿ ಸಲ್ಲಿಸಿzರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಡಿಪಿಐ ಬೆಳಗಾವಿ ಘಟಕದ ಅಧ್ಯಕ್ಷರಾದ ಅಮೀರ್ ಖಾನ್, ಗ್ಯಾನವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ಅದು ಶಿವಲಿಂಗವಲ್ಲ, ನೀರಿನ ಫೌಂಟೆನ್. ಆದರೆ ವಾರಣಾಸಿ ನ್ಯಾಯಾಲಯ ಮಸೀದಿಯನ್ನು ಸೀಲ್ ಮಾಡುವಂತೆ ಆದೇಶ ನೀಡಿದೆ.
ಆದರೆ ನಾವು ಈ ಆದೇಶವನ್ನು ಒಪ್ಪುವುದಿಲ್ಲ. ಇದರಲ್ಲಿಬಿಜೆಪಿ ಹಾಗೂ ಆರ್ಎಸ್ಎಸ್ ನವರ ಕುತಂತ್ರವಿದೆ. ಈ ನ್ಯಾಯಾಲಯದ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗಿ ಹೋರಾಟ ಮಾಡುತ್ತೇವೆ ಎಂದರು.
ಈ ವೇಳೆ ಎಸ್ಡಿಪಿಐ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು, ಹಾಗೂ ಎಲ್ಲಾ ಪದಾಧಿಕಾರಿಗಳೂ ಕೂಡ ಪುಸ್ಥಿತರಿದ್ದರು.