fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
National

ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್‍ಗೆ ಆಗಮಿಸಿದ ರತನ್ ಟಾಟಾ: ಅಚ್ಚರಿಗೊಂಡ ನೆಟ್ಟಿಗರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮುಂಬೈ : ಟಾಟಾ ಗ್ರೂಪ್‌ನ ಅಧ್ಯಕ್ಷ ರತನ್ ಟಾಟಾ ಅವರು ಟಾಟಾ ನ್ಯಾನೋದಲ್ಲಿ ತಾಜ್ ಹೋಟೆಲ್‌ಗೆ ಆಗಮಿಸಿರುವ ವಿಡಿಯೋ ವೈರಲ್ ಆಗಿದ್ದು, ಇದು ನೆಟ್ಟಿಗರ ಹೃದಯ ಗೆದ್ದಿದೆ.

ಮಧ್ಯಮವರ್ಗದವರಿಗೆಂದೇ ತಯಾರಿಸಲಾಗಿದ್ದ ಬಜೆಟ್ ಸ್ನೇಹಿ ಕಾರು ನ್ಯಾನೋವನ್ನು 2008ರಲ್ಲಿ ಬಿಡುಗಡೆ ಮಾಡಲಾಯಿತು.

ರತನ್ ಟಾಟಾ ಕೆಲವು ದಿನಗಳ ಹಿಂದೆ ತಮ್ಮ ಇನ್ಸ್ಟಾಗ್ರಾಂನಲ್ಲಿ ಥ್ರೋಬ್ಯಾಕ್ ಚಿತ್ರವನ್ನು ಹಂಚಿಕೊಂಡಿದ್ದರು. ಈಗ, ಟಾಟಾ ಗ್ರೂಪ್‌ನ ಅಧ್ಯಕ್ಷ ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್ ಗೆ ಆಗಮಿಸುವ ಮುಖಾಂತರ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ.

ಮುಂಬೈ ಮೂಲದ ಸೆಲೆಬ್ರಿಟಿ ಛಾಯಾಗ್ರಾಹಕ ವೈರಲ್ ಭಯಾನಿ ಅವರು ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ರತನ್ ಟಾಟಾ ಅವರು ಯಾವುದೇ ಅಂಗರಕ್ಷಕರು ಇಲ್ಲದೆ ಬಿಳಿ ಬಣ್ಣದ ನ್ಯಾನೋ ಕಾರಿನಲ್ಲಿ ತಾಜ್ ಹೋಟೆಲ್ ಗೆ ಆಗಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ನಂತರ ಅವರನ್ನು ಹೋಟೆಲ್ ಸಿಬ್ಬಂದಿ ಒಳಗೆ ಕರೆದೊಯ್ದಿದ್ದಾರೆ. ರತನ್ ಟಾಟಾರ ಸರಳತೆ ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ಹಲವಾರು ವೀಕ್ಷಣೆ, ಪ್ರತಿಕ್ರಿಯೆಗಳೊಂದಿಗೆ ವಿಡಿಯೋ ವೈರಲ್ ಆಗಿದೆ. ಕೆಲವರು ಕೈಗಾರಿಕೋದ್ಯಮಿಗೆ ತಮ್ಮ ಗೌರವವನ್ನು ಸೂಚಿಸಿದರೆ, ಇನ್ನು ಕೆಲವರು ನಿಜ ಜೀವನದಲ್ಲಿ ರತನ್ ಟಾಟಾ ಅವರು ಎಷ್ಟು ಸರಳ ವ್ಯಕ್ತಿಯಾಗಿದ್ದಾರೆ ಎಂದು ಕೊಂಡಾಡಿದ್ದಾರೆ.

ಟಾಟಾ ಮೋಟಾರ್ಸ್ ಅಧಿಕೃತವಾಗಿ ಜನವರಿ 10, 2008 ರಂದು ನ್ಯಾನೋವನ್ನು ಬಿಡುಗಡೆ ಮಾಡಿತು. ಇದೀಗ ಬೇಡಿಕೆ ಬಹಳಷ್ಟು ಕಡಿಮೆಯಿದ್ದುದರಿಂದ ಉತ್ಪಾದನೆಯನ್ನು ನಿಲ್ಲಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: