EducationKarnataka News
ಭಾರೀ ಮಳೆ ಹಿನ್ನಲೆ: ಇಂದು ಶಿವಮೊಗ್ಗ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ), ಇಂದು ಎಲ್ಲಾ ಶಾಲೆಗಳಿಗೆ ( School ) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಡಿಸಿ ಡಾ.ಸೆಲ್ವಮಣಿ ಅವರು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ, ಇಂದು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಗಳಿಗೂ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಒಂದು ದಿನ ರಜೆಯನ್ನು ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ನಾಳೆ ಪರಿಸ್ಥಿತಿ ನೋಡಿಕೊಂಡು ರಜೆಯನ್ನು ಮುಂದುವರಿಸೋ ಸಾಧ್ಯತೆ ಇದೆ.