Karnataka News
BREAKING NEWS : ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ : 7 ಜನರು ಸ್ಥಳದಲ್ಲೇ ಸಾವು

ಧಾರವಾಡ : ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ರೇವಣ ಸಿದ್ದೇಶ್ವರ ಮಠದಲ್ಲಿ ಮದುವೆ ಮುಗಿಸಿಕೊಂಡು ನಿಗದಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಸುದ್ದಿ ತಿಳಿದ ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಕುರಿತು ಮಾಹಿತಿ ಪಡೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.