fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsNational

ಹೊರಗೆ ಸ್ಪಾ.. ಒಳಗೆ ವೇಶ್ಯಾವಾಟಿಕೆ ಅಡ್ಡೆ..! ಸೆಕ್ಸ್ ರಾಕೆಟ್ ನಲ್ಲಿ ಬಿಜೆಪಿ ನಾಯಕನ ಹೆಸರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಲಕ್ನೋ: ಬಿಜೆಪಿ ನಾಯಕನೊಬ್ಬನ ವಿರುದ್ಧ ವೇಶ್ಯಾವಾಟಿಕೆ ಆರೋಪ ಕೇಳಿ ಬಂದಿದೆ. ಈ ಮಾಹಿತಿ ಬಹಿರಂಗಗೊಂಡ ಬೆನ್ನಲ್ಲೇ ವೇಶ್ಯಾವಾಟಿಕೆ ಆರೋಪದ ಮೇಲೆ ಬಿಜೆಪಿ ನಾಯಕನನ್ನು ನಯೀ ಮಂಡಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಸೆಕ್ಸ್ ರ್ಯಾಕೆಟ್‌ನಲ್ಲಿ ಸಿಕ್ಕಾಕೊಂಡ ಯುವತಿ ಬಾಯ್ಬಿಟ್ಟ ಆಘಾತಕಾರಿ ಮಾಹಿತಿ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

ಆರೋಪಿ ಬಿಜೆಪಿ ಮುಖಂಡ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ಸಿಕ್ಕಿಬಿದ್ದ ಯುವತಿ ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ನಾಯಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,

ಅಲ್ಲಿಂದ ಜೈಲಿಗೆ ಕಳುಹಿಸಿದ್ದಾರೆ. ನಯೀ ಮಂಡಿ ಪೊಲೀಸ್‌ ಠಾಣಾ ಇನ್ಸ್‌ಪೆಕ್ಟರ್ ಹರ್ಷರಣ್ ಶರ್ಮಾ, ಎಸ್‌ಎಸ್‌ಐ ಎಂಎಸ್ ಬಿಶ್ತ್ ಅವರು ಪೊಲೀಸ್ ತಂಡದೊಂದಿಗೆ ಬಿಜೆಪಿ ಮುಖಂಡ ಜಿತೇಂದ್ರ ಚೌಧರಿ ಅವರನ್ನು ಸಂಧಾವಳಿ ಪುಲಿಯಾ ಬಳಿಯಿಂದ ಬಂಧಿಸಿದ್ದಾರೆ. ಪೊಲೀಸರು ಸ್ಥಳದಿಂದ ಯುವತಿ ಮತ್ತು ಇಬ್ಬರು ಯುವಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಎರಡು ದಿನಗಳ ನಂತರ ಕಟ್ಟಡ ಮಾಲೀಕನನ್ನು ಹಿಡಿದು ಜೈಲಿಗೆ ಕಳುಹಿಸಲಾಯಿತು. ಈ ಸೆಕ್ಸ್ ರ್ಯಾಕೆಟ್‌ ಹಿಂದೆ ಬಿಜೆಪಿ ನಾಯಕನ ಕೈವಾಡ ಇದೆ ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ. ಬಿಜೆಪಿ ಮುಖಂಡನನ್ನು ವೇಶ್ಯಾವಾಟಿಕೆಗಾಗಿ ಬಂಧಿಸಲಾಗಿದೆ ಎಂದು ನಯೀ ಮಂಡಿ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

ಎರಡು ವಾರಗಳ ಹಿಂದೆ ಗಾಂಧಿ ಕಾಲೋನಿಯ ರಸ್ತೆ ಸಂಖ್ಯೆ 16ರ ಮನೆಯೊಂದರ ಮೇಲೆ ದಾಳಿ ನಡೆಸಿ ಸೆಕ್ಸ್‌ ರ್ಯಾಕೆಟ್‌ ಮೇಲೆ ದಾಳಿ ನಡೆಸಿದ್ದೆವು. ಇದನ್ನು ಗೋಯಲ್ ಕೋಚಿಂಗ್ ಸೆಂಟರ್‌ನ ಹೆಸರು ಬಳಸಿ ನಡೆಸಲಾಗುತ್ತಿತ್ತು. ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಜಿತೇಂದ್ರ ಚೌಧರಿ ಸಂಘಟನೆಯಲ್ಲಿ ಪದಾಧಿಕಾರಿಯಾಗಿರಲಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರೂಪೇಂದ್ರ ಸೈನಿ ಹೇಳುತ್ತಾರೆ. ಕಾರ್ಯಕರ್ತರಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಯಾವುದೇ ಪಕ್ಷದ ಮುಖಂಡರು, ಪದಾಧಿಕಾರಿಗಳು ಅಥವಾ ಕಾರ್ಯಕರ್ತರು ತಪ್ಪು ಮಾಡಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನುಡಿದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: