fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EntertainmentNational
Trending

ವರದಕ್ಷಿಣೆ ಪಡೆದಿದ್ರಾ ದಕ್ಷಿಣ ಭಾರತದ ಈ ಖ್ಯಾತ ನಟ: ಅಳಿಯನ ಬಗ್ಗೆ ಮಾವ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ವರದಕ್ಷಿಣೆ ಸಾಮಾಜಿಕ ಪಿಡುಗು ಎಂಬುದು ಎಲ್ಲರಿಗೂ ತಿಳಿದ ವಿಚಾರ. ವರದಕ್ಷಿಣೆಯನ್ನು ಪಡೆಯುವುದು ಮತ್ತು ಕೊಡುವುದು ಎರಡೂ ಅಪರಾಧವೇ. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಅಷ್ಟೇ ಅಲ್ಲದೆ, ಈ ಸಂಬಂಧ ಸಾಮಾಜಿಕ ಕಳಕಳಿಯನ್ನೂ ಸಹ ಮೂಡಿಸಲಾಗುತ್ತಿದೆ.

ಆದರೆ ದಕ್ಷಿಣ ಭಾರತದ ಖ್ಯಾತ ನಟ ತಮ್ಮ ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ.

ಟಾಲಿವುಡ್‌ನ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌ ತಮ್ಮ ಮದುವೆ ಸಂದರ್ಭದಲ್ಲಿ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಪ್ರಶ್ನೆಯನ್ನು ಅವರ ಮಾವ ಕಂಚರಾಲ ಚಂದ್ರಶೇಖರ್​ ರೆಡ್ಡಿ ಬಳಿ ಸಂದರ್ಶನವೊಂದರಲ್ಲಿ ಕೇಳಲಾಗಿದೆ. ಅದಕ್ಕೆ ಅವರು, “ನನ್ನ ಅಳಿಯ ಅಲ್ಲು ಅರ್ಜುನ್‌ ವರದಕ್ಷಿಣೆ ಪಡೆದುಕೊಂಡಿಲ್ಲ. ಅಲ್ಲು ಕುಟುಂಬ ವರದಕ್ಷಿಣೆಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ಅಲ್ಲು ಅರ್ಜುನ್‌ಗೆ ತೆಲುಗು ಭಾಷೆ ಮಾತ್ರವಲ್ಲ ದೇಶದೆಲ್ಲೆಡೆ ಅನೇಕ ಅಭಿಮಾನಿಗಳಿದ್ದಾರೆ. ಅಂತಹ ನಾಯಕ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಈಗ ಉತ್ತರ ಸಿಕ್ಕಿದಂತಾಗಿದೆ. ಅಲ್ಲು ಅರ್ಜುನ್‌ ಅವರು 2011ರಲ್ಲಿಸ್ನೇಹಾ ರೆಡ್ಡಿಯನ್ನು ವರಿಸಿದ್ದಾರೆ. ಪ್ರೀತಿಸಿ ಮದುವೆಯಾದ ಈ ಜೋಡಿ ಟಾಲಿವುಡ್‌ನಲ್ಲಿ ಸಖತ್‌ ಫೇಮಸ್‌ ಆಗಿದ್ದಾರೆ.

 

​ಇತ್ತೀಚೆಗೆ ಅಲ್ಲು ಅರ್ಜುನ್‌ ಅಭಿನಯದ ಪುಷ್ಟ ಸಿನಿಮಾ ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿತ್ತು. ಇದೀಗ ಕೊಂಚ ಬ್ರೇಕ್‌ ಪಡೆದ ನಟ ತಮ್ಮ ಕುಟುಂಬದ ಜೊತೆಗೆ ಸಮಯ ಕಳೆಯುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: