fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime News

ಅಕ್ರಮ ಮದ್ಯ ಮಾರಾಟ: ಇಬ್ಬರ ಬಂಧನ,

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬಂಟ್ವಾಳ: ಲೊರೆಟ್ಟೋಪದವಿನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಪಡಿಸಿದ್ದಾರೆ.

ಪಂಜಿಕಲ್ಲು ಗ್ರಾಮದ ನಿವಾಸಿ ಪೂವನಬೆಟ್ಟು ನಿವಾಸಿ ರಾಜೇಶ್‌ ಪೂಜಾರಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ.

ಬಂಟ್ವಾಳ ನಗರ ಠಾಣಾ ಪಿಎಸ್‌ಐ ಅವಿನಾಶ್‌ ಗೌಡ ಗಸ್ತು ತಿರುಗುತ್ತಿದ್ದ ವೇಳೆಗೆ ಬಂದ ಮಾಹಿತಿಯಂತೆ ದಾಳಿ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

 

350 ಎಂಎಲ್‌ನ ಚಿಲ್ಲರೆ ಮಾರಾಟ ಮಾಡುವ 8 ಪಿಎಂ ಬಾಟಲಿ, 750 ಎಂಎಲ್‌ ಮದ್ಯ, 200 ರೂ. ನಗದು ವಶಕ್ಕೆ ಪಡೆದಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಮಂಜೂರಿನಲ್ಲಿ ಓರ್ವ ವಶ
ಮಂಗಳೂರು: ವಾಮಂಜೂರಿನಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪೂವಪ್ಪ ಶೆಟ್ಟಿ(68)ಯನ್ನು ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿದಾಗ ಅಲ್ಲಿದ್ದ ಕೆಲವು ಮಂದಿ ಓಡಿ ಹೋಗಿದ್ದಾರೆ. ಪೂವಪ್ಪ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದು ಆತ ಗಂಜಿ ಊಟ ತಯಾರಿಸಿ ಮಾರಾಟ ಮಾಡುತ್ತಿರುವ ಶೆಡ್‌ನ‌ಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡುತ್ತಿರುವುದು ಗೊತ್ತಾಗಿದೆ. ಆತನ ಬಳಿ ಇದ್ದ 90 ಎಂಎಲ್‌ ಪ್ರಮಾಣದ ಒಟ್ಟು 1,620 ರೂ. ಮೌಲ್ಯದ 45 ವಿಸ್ಕಿ ಟೆಟ್ರಾ ಪ್ಯಾಕೆಟ್‌ ಹಾಗೂ 200 ರೂ. ನಗದನ್ನು ಪೊಲೀಸರು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: