fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಅಗ್ನಿಶಾಮಕ ಇಲಾಖೆಯಲ್ಲೂ ನೇಮಕಾತಿ ಅಕ್ರಮ: 7 ಮಂದಿ ಮೇಲೆ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಪೊಲೀಸ್‌ ಇಲಾಖೆಯ ಮತ್ತೊಂದು ವಿಭಾಗದಲ್ಲೂ ಅಕ್ರಮ ನೇಮಕಾತಿಯ ಆರೋಪ ಕೇಳಿ ಬಂದಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವಿವಿಧ ವೃಂದದ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಈ ಸಂಬಂಧ ಅಗ್ನಿಶಾಮಕ ದಳದ ಡೆಪ್ಯೂಟಿ ಡೈರೆಕ್ಟರ್‌ ಟಿ.ಎನ್‌.

ಶಿವಶಂಕರ್‌ ಅವರು ನೀಡಿದ ದೂರಿನ ಮೇರೆಗೆ ಸುಭಾಷ್‌ ಡಿ.ಎಚ್‌. ಧರಣಪ್ಪ (21), ವಿಥೋಲ್‌ ನಿಂಗಪ್ಪ (29), ಮೌಲಸಾಬ್‌ ಶಮ್ಶೆದ್‌ (27), ಈರಪ್ಪನ ರುದ್ರೋದಗಿ ನೀಲಪ್ಪ (24), ಮಲ್ಲಪ್ಪ ಮಾರುತಿ (27), ರಮೇಶ್‌ ಹಳೇನೂರು ಪ್ರಭಾಕರ್‌ (26), ಶರೀಫ್ ಸಾಬ್‌ ಯಮನೂರಸಾಬ್‌ (26) ಅವರ ವಿರುದ್ಧ ಭಾರತೀನಗರ ಪೊಲೀಸರು ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಕಲಿ ಅಂಕಪಟ್ಟಿ ಸಲ್ಲಿಕೆ
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಫೈರ್‌ಮನ್‌ ಸೇರಿ ವಿವಿಧ ವೃಂದದ ಹುದ್ದೆಗಳಿಗೆ 2020ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ದೇಹದಾಡ್ಯìತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ ಉತ್ತೀರ್ಣರಾದವರ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆಗಳ ಪರಿಶೀಲನೆ ವೇಳೆ ಏಳು ಮಂದಿ ಆರೋಪಿಗಳು ಸಲ್ಲಿಸಿದ್ದ ಎಸೆಸೆಲ್ಸಿ ಮೂಲ ಅಂಕಪಟ್ಟಿಗಳು ನಕಲಿ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಕಾರ್ಯದರ್ಶಿಗಳು ದೃಢೀಕರಿಸಿದ್ದಾರೆ. ಹೀಗಾಗಿ ನಕಲಿ ಅಂಕಪಟ್ಟಿ ನೀಡಿ ಸರಕಾರಿ ಉದ್ಯೋಗ ಪಡೆಯಲು ಯತ್ನಿಸಿದ ಏಳು ಮಂದಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಿವಶಂಕರ್‌ ಅವರು ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ತನಿಖೆ ಆರಂಭಿಸಿರುವ ಭಾರತೀನಗರ ಪೊಲೀಸರು, ಏಳು ಮಂದಿ ಆರೋಪಿಗಳಿಗೆ ಸಂಪರ್ಕಿಸಿ ಅಂಕಪಟ್ಟಿಗಳ ಜತೆ ಠಾಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದು, ಅಸಲಿಯೋ? ಅಥವಾ ನಕಲಿಯೋ ಎಂಬ ಬಗ್ಗೆ ದಾಖಲೆ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: