Karnataka News
545 ಪಿಎಸ್ ಐ ನೇಮಕಾತಿ ಹಗರಣ : ಮತ್ತೆ 6 ಜನರನ್ನು ಬಂಧಿಸಿದ ಸಿಐಡಿ

ಬೆಂಗಳೂರು : 545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೆ 6 ಜನರನ್ನು ಬಂಧಿಸಿದೆ.
ಡಿವೈಎಸ್ ಪಿ ಶಾಂತಕುಮಾರ್ ನಿರಂತರ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ವಿಚಾರಣೆ ಬಳಿಕ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ಡಿವೈಎಸ್ ಪಿ ಶಾಂತಕುಮಾರ್ ಸೂಚನೆಯಂತೆ ಕೆಲಸ ಮಾಡುತ್ತಿದ್ದರು ಎನ್ನಲಾದ 6 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಪಿಎಸ್ ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಡಿವೈಎಸ್ ಪಿ ಶಾಂತಕುಮಾರ್ ನನ್ನು ಸಿಐಡಿ ಮತ್ತೆ ವಶಕ್ಕೆ ಪಡೆದಿದೆ. ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಲಾಗಿತ್ತು. ಸಿಐಡಿ ಮನವಿ ಮೇರೆಗೆ ಮತ್ತೆ 3 ದಿನ ಸಿಐಡಿ ವಶಕ್ಕೆ ಪಡೆಯಲಾಗಿದೆ.