fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime News

ಬಯಲಾಗ್ತಿದೆ ಬಿಜೆಪಿ ಮುಖಂಡನ ಲವ್ ಪುರಾಣ..! ಪತ್ನಿ ಬಗ್ಗೆ ಮತ್ತೊಂದು ಸ್ಫೋಟಕ ಮಾಹಿತಿ ಬಯಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು ಮೇ.12ರಂದು ಬಿಜೆಪಿ ಮುಖಂಡ ಬಿ.ಪಿ.ಅನಂತರಾಜು ಆತ್ಮಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ಬಿ.ಕೆ.ಸುಮಾ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಹಿನ್ನೆಲೆಯಲ್ಲಿ ಮಧ್ಯಾಹ್ನ ಇನ್ಸ್‌ಪೆಕ್ಟರ್‌ ರವಿಕುಮಾರ್‌ ಮುಂದೆ ಹಾಜರಾದ ಸುಮಾ ಅವರನ್ನು ನಾಲ್ಕು ತಾಸು ಸುದೀರ್ಘವಾಗಿ ಪ್ರಶ್ನಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಆದರೆ ತನ್ನ ಮೇಲಿನ ಆರೋಪಗಳನ್ನು ಸುಮಾ ನಿರಾಕರಿಸಿದ್ದಾರೆ.

ಇತ್ತೀಚಿಗೆ ವೈಯಕ್ತಿಕ ಕಾರಣಕ್ಕೆ ಅನಂತರಾಜ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಬಳಿಕ ತಮ್ಮ ಪತಿಗೆ ಸಾವಿಗೆ ಹನಿಟ್ರ್ಯಾಪ್‌ ಕಾರಣ ಎಂದೂ ಆರೋಪಿಸಿ ಸುಮಾ ನೀಡಿದ ದೂರಿನ ಮೇರೆಗೆ ಅನಂತರಾಜು ಅವರ ಗೆಳತಿ ರೇಖಾಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಈ ಬಂಧನ ಬಳಿಕ ಪ್ರಕರಣಕ್ಕೆ ಅನಿರೀಕ್ಷಿತ ತಿರುವು ಸಿಕ್ಕಿದ್ದು, ಅನಂತರಾಜು ಕೌಟುಂಬಿಕ ಕಲಹದ ಆಡಿಯೋಗಳು ಬಯಲಾಗಿ ವೈರಲ್‌ ಆಗಿದ್ದವು. ಈ ಆಡಿಯೋಗಳಲ್ಲಿ ಪತಿಗೆ ಸುಮಾ ಜೀವ ಬೆದರಿಕೆ ಹಾಕುವ ಮಾತು ಉಲ್ಲೇಖವಾಗಿತ್ತು.

ಆಡಿಯೋದಲ್ಲಿನ ಸಂಭಾಷಣೆಯನ್ನೇ ಮುಂದಿಟ್ಟು ವಿಚಾರಣೆ ನಡೆಸಿದ ಪೊಲೀಸರು, ತಮ್ಮ ದಾಂಪತ್ಯ ಜೀವನದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅನಂತರಾಜ್‌ ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿ ಬಂದ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಂತರಾಜ್‌ಗೆ ಪತ್ನಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹಲ್ಲೆ ನಡೆಸಿರುವುದು ಕೇಳಿಬಂದಿದೆ. ಅನಂತ್‌ಗೆ ಯಾವುದೇ ಕಿರುಕುಳ ಕೊಡಬೇಡ. ನನಗೆ ಕೊಡು ನಾನು ದೂರ ಆಗುತ್ತೇನೆ ಎಂದು ರೇಖಾ ಗೋಗರೆಯುತ್ತಾಳೆ. ಇದಕ್ಕೆ ಅನಂತರಾಜ್‌ ಪತ್ನಿ, ಈಗಾಗಲೇ ಕೈ ಮುರಿದು, ಎದೆ ಮೇಲೆ ಹಲ್ಲೆ ನಡೆಸಿ ಆಸ್ಪತ್ರೆಗೆ ಸೇರಿಸಿದ್ದೆ. ಬೇಕಾದರೆ ವಾರ್ಡ್‌ನ ಜನರನ್ನು ಕೇಳು. ನಂಬಿಕೆ ಇಲ್ಲವಾದರೆ, ವಿಡಿಯೋ ಕಾಲ್‌ ಮಾಡಿ ಮಾತನಾಡು ಎಂದು ಸುಮಾ, ಹೇಳುವ ಮಾತುಗಳು ಕೇಳಿಬಂದಿದ್ದವು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: