Crime News
ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಹಿರೇಬಾಗೇವಾಡಿ ಪೊಲೀಸರಿಂದ ಓರ್ವ ಆರೋಪಿ ಅರೆಸ್ಟ್

ತನ್ನ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಅದನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಹಿರೇಬಾಗೇವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಬೆಳಗಾವಿ ತಾಲೂಕಿನ ಹಾಲಗಿಮರಡಿ ಗ್ರಾಮದ ಬಸನಗೌಡ ರುದ್ರಗೌಡ ಪಾಟೀಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 18 ಸಾವಿರ ರೂಪಾಯಿ ಮೌಲ್ಯದ 1 ಕೆಜಿ 558 ಗ್ರಾಂ ಗಾಂಜಾವನ್ನು ಹಿರೇಬಾಗೇವಾಡಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಹಿರೇಬಾಗೇವಾಡಿ ಸಿಪಿಐ ಶಿವಕುಮಾರ್ ಸಿನ್ನೂರ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.