fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime NewsKarnataka News

ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ: ಹೃದಯಾಘಾತದ ನಾಟಕ ಬೆಳಕಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಹೆರೋಹಳ್ಳಿ ವಾರ್ಡ್‌ನ ಬಿಜೆಪಿ ಮುಖಂಡ ಬಿ.ಪಿ. ಅನಂತರಾಜು (46) ಆತ್ಮಹತ್ಯೆ ಪ್ರಕರಣದ ತನಿಖೆ ಮುಂದುವರಿದಿದ್ದು, ಅವರು ನೇಣು ಹಾಕಿಕೊಳ್ಳಲು ಬಳಸಿದ್ದರು ಎನ್ನಲಾದ ವೇಲ್ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಪೊಲೀಸರಿಗೆ ಸಿಕ್ಕಿದೆ.

 

‘ಹನಿಟ್ರ್ಯಾಪ್‌ ಜಾಲಕ್ಕೆ ಸಿಲುಕಿ ಪತಿ ಅನಂತರಾಜು ಮೇ 12ರಂದು ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬುದಾಗಿ ಪತ್ನಿ ಸುಮಾ ದೂರು ನೀಡಿದ್ದರು. ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ಕೆ.ಆರ್.ಪುರ ನಿವಾಸಿ ರೇಖಾ ಹಾಗೂ ಇತರರನ್ನು ಬಂಧಿಸಿದ್ದರು.

‘ಅನಂತರಾಜು ಸಾವಿಗೆ ಪತ್ನಿ ಸುಮಾ ಕಾರಣ’ ಎಂಬುದಾಗಿ ಬಂಧಿತ ಆರೋಪಿಗಳು ಹೇಳಿಕೆ ನೀಡಿದ್ದರಿಂದ, ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಪತ್ನಿ ಮೇಲೂ ಅನುಮಾನ ವ್ಯಕ್ತಪಡಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹೃದಯಾಘಾತ ನಾಟಕ: ‘ಮನೆಯ ಕೊಠಡಿಯೊಳಗೆ ಹೋಗಿದ್ದ ಅನಂತರಾಜು, ಹಲವು ಗಂಟೆಯಾದರೂ ಬಾಗಿಲು ತೆರೆದಿರಲಿಲ್ಲ. ಮಗಳು ಹೋಗಿ ಬಾಗಿಲು ಬಡಿದರೂ ಪ್ರತಿಕ್ರಿಯಿಸಿರಲಿಲ್ಲ. ನಕಲಿ ಕೀ ಬಳಸಿ ಕೊಠಡಿ ಬಾಗಿಲು ತೆರೆದಾಗ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತಿಯ ಮೃತದೇಹ ಕಂಡಿತು’ ಎಂಬುದಾಗಿ ಪತ್ನಿ ಸುಮಾ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು, ‘ಮೃತದೇಹವನ್ನು ಇಳಿಸಿದ್ದ ಪತ್ನಿ ಹಾಗೂ ಇತರರು, ಆತ್ಮಹತ್ಯೆ ವಿಷಯ ಮುಚ್ಚಿಡಲು ಯತ್ನಿಸಿದ್ದರು. ಹೃದಯಾಘಾತವಾಗಿರುವುದಾಗಿ ಸ್ಥಳೀಯರಿಗೆ ಹೇಳಿದ್ದರು. ನಂತರ, ಮೃತದೇಹವನ್ನು ಸಮೀಪದ ನರ್ಸಿಂಗ್ ಹೋಮ್‌ಗೆ ತೆಗೆದುಕೊಂಡು ಹೋಗಿದ್ದರು. ತಪಾಸಣೆ ನಡೆಸಿದ್ದ ವೈದ್ಯರು, ಗಂಟೆಗೂ ಮುನ್ನವೇ ಅನಂತರಾಜು ಮೃತಪಟ್ಟಿರುವುದಾಗಿ ತಿಳಿಸಿದ್ದರು. ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಆಸ್ಪತ್ರೆಯವರೇ ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅನಂತರಾಜು ಮೃತರಾದ ದಿನ ಯಾರೊಬ್ಬರೂ ದೂರು ನೀಡಿರಲಿಲ್ಲ. ಆಸ್ಪತ್ರೆ ಮಾಹಿತಿ ಆಧರಿಸಿ ಪೊಲೀಸರೇ ಮಾಹಿತಿ ಕಲೆಹಾಕುತ್ತಿದ್ದರು. ಮೂರು ದಿನಗಳ ನಂತರ ಪತ್ನಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಇದು ಸಹ ಅನುಮಾನಕ್ಕೆ ಕಾರಣವಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ವೇಲ್‌ ಸುಡುವಂತೆ ಸೂಚನೆ: ‘ಅನಂತರಾಜು ನೇಣು ಹಾಕಿಕೊಳ್ಳಲು ಬಳಸಿದ್ದರು ಎನ್ನಲಾದ ವೇಲ್‌ ಅನ್ನು ಕೆಲಸಗಾರರಿಗೆ ನೀಡಿದ್ದ ಸುಮಾ, ಸುಟ್ಟು ಹಾಕುವಂತೆ ಹೇಳಿದ್ದರು’ ಎಂದು ಪೊಲೀಸ್ ಮೂಲಗಳು ವಿವರಿಸಿವೆ.

‘ಕೆಲಸಗಾರ, ನಿರ್ಜನ ಪ್ರದೇಶವೊಂದರಲ್ಲಿ ವೇಲ್ ಸುಟ್ಟು ಬಂದಿದ್ದ. ಮಳೆ ಬಂದಿದ್ದರಿಂದ, ಅರ್ಧ ವೇಲ್ ಮಾತ್ರಸುಟ್ಟಿತ್ತು. ಉಳಿದ ಅರ್ಧ ವೇಲ್ ಪತ್ತೆ ಮಾಡಿ, ಪರೀಕ್ಷೆಗೆಂದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.

*

ಅನಂತರಾಜು ಸಾವಿನ ಬಗ್ಗೆ ಅನುಮಾನವಿದೆ. ಮರಣೋತ್ತರ ಪರೀಕ್ಷೆ, ವಿಧಿವಿಜ್ಞಾನ ಪ್ರಯೋಗಾಲಯದಿಂದ ವರದಿ ಬಂದ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ.
-ಸಂಜೀವ್ ಪಾಟೀಲ, ಪಶ್ಚಿಮ ವಿಭಾಗದ ಡಿಸಿಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: