fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
National

ಡ್ರಗ್ಸ್ ಪಾರ್ಟಿ ಪ್ರಕರಣ: ಶಾರುಖ್ ಪುತ್ರ ಆರ್ಯನ್ ಖಾನ್ ಗೆ NCB ಕ್ಲೀನ್ ಚಿಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಮುಂಬಯಿ: ಐಶಾರಾಮಿ ಕ್ರೂಸ್ ಹಡಗಿನಲ್ಲಿನ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಇತರ 5 ಪ್ರಕರಣಗಳ ಕುರಿತು ಎನ್ ಸಿಬಿ ಶುಕ್ರವಾರ (ಮೇ 27) ಕ್ಲೀನ್ ಚಿಟ್ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

 

ಐಶಾರಾಮಿ ಕ್ರೂಸ್ ಹಡಗಿನಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಹಾಗೂ ಸ್ನೇಹಿತರಾದ ಅರ್ಬಾಜ್ ಮರ್ಚಂಟ್ ಮತ್ತು ಫ್ಯಾಷನ್ ಡಿಸೈನರ್ ಮುನ್ಮೂನ್ ಧಮೇಚಾ ಡ್ರಗ್ಸ್ ಪಾರ್ಟಿ ಮಾಡಿರುವುದಾಗಿ ಆರೋಪಿಸಿ ಬಂಧಿಸಲಾಗಿತ್ತು.

ಕಳೆದ ವರ್ಷ ಮುಂಬಯಿಯ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ನಿಗ್ರಹ ದಳ ಸುಮಾರು 6,000 ಪುಟಗಳ ಆರೋಪಪಟ್ಟಿಯನ್ನು ಎನ್ ಸಿಬಿ ಕೋರ್ಟ್ ಗೆ ಸಲ್ಲಿಸಿತ್ತು. ಇದರಲ್ಲಿ 14 ಮಂದಿ ಆರೋಪಿಗಳನ್ನು ಹೆಸರಿಸಲಾಗಿತ್ತು.

ಪ್ರಕರಣದಲ್ಲಿ ಆರ್ಯನ್ ಖಾನ್ ಕೆಲವು ದಿನಗಳ ಕಾಲ ಜೈಲಿನಲ್ಲಿದ್ದ. ಆದರೆ ಕೋರ್ಟ್ ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಆರ್ಯನ್ ಖಾನ್ ನನ್ನು ಆರೋಪಿ ಎಂದು ಹೆಸರಿಸಿರಲಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಆರ್ಯನ್ ಖಾನ್ ಹಾಗೂ ಇತರ ಇಬ್ಬರು ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬಲವಾದ ಸಾಕ್ಷ್ಯಗಳು ಮೇಲ್ನೋಟಕ್ಕೆ ಕಂಡುಬರುತ್ತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿ, ಮೂವರು ಆರೋಪಿಗಳಿಗೆ ಅ.28ರಂದು ಜಾಮೀನು ಮಂಜೂರು ಮಾಡಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: