ರಾಜ್ಯದಲ್ಲಿ ‘ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ’ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ( Petrol and Diesel Price ) ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಬಳಿಕ, ಕೆಲ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲಾಗಿತ್ತು. ಕರ್ನಾಟಕದಲ್ಲಿಯೂ ಇಳಿಕೆ ಮಾಡಲಾಗುತ್ತದೆ ಎನ್ನಲಾಗಿತ್ತು.
ಆ ಬಗ್ಗೆ ಸಿಎಂ ಬೊಮ್ಮಾಯಿ ( CM Bommai ) ಏನ್ ಹೇಳಿದ್ರು ಅಂತ ಮುಂದೆ ಓದಿ..
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಆ ಬಗ್ಗೆ ಚರ್ಚಿಸಿ ತೀರ್ಮಾನ ಪ್ರಕಟಿಸೋದಾಗಿ ಹೇಳಿದರು.
ಅಂದಹಾಗೇ ಮೇ.21ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ( Union Minister Nirmala Seetharaman ) ಅವರು ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 8 ರೂ ಮತ್ತು ಡೀಸೆಲ್ ಮೇಲೆ 6 ರೂ ಕಡಿತ ಮಾಡಿದ್ದರು. ಹೀಗಾಗಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 9.5 ರೂ ಹಾಗೂ ಡೀಸೆಲ್ 7 ರೂ ಇಳಿಕೆಯಾಗಿತ್ತು. ನೆರೆ ರಾಜಸ್ಥಾನ, ಕೇರಳ, ಮಹಾರಾಷ್ಟ್ರ ರಾಜ್ಯಗಳು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ್ದವು. ಕರ್ನಾಟಕದಲ್ಲಿಯೂ ಇಳಿಕೆ ಆಗಲಿದೆ ಎನ್ನುವ ನಿರೀಕ್ಷೆ ಇತ್ತು.