
ಚಂಡೀಘರ್, ಮೇ 31: ಪಂಜಾಬಿ ಗಾಯಕ ಮತ್ತು ರಾಜಕಾರಣಿ ಸಿಧು ಮೂಸೆವಾಲಾರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಮೊದಲ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಮನ್ಪ್ರೀತ್ನನ್ನು ಬಂಧಿಸಿದ ಪೊಲೀಸರು ಆತನನ್ನು ಕೋರ್ಟ್ ಎದುರು ಹಾಜರುಪಡಿಸಿದರು.
ನಂತರ ಐದು ದಿನಗಳ ಕಾಲ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಮನ್ಪ್ರೀತ್ನನ್ನು ಪ್ರಕರಣದ ಪ್ರಮುಖ ಆರೋಪಿ ಎಂದು ಪರಿಗಣಿಸಲಾಗಿದ್ದು, ನಿನ್ನೆ ಉತ್ತರಾಖಂಡದಲ್ಲಿ ಈತನನ್ನು ಬಂಧಿಸಲಾಗಿತ್ತು.
ಪೊಲೀಸರ ಪ್ರಕಾರ, ಜಂಟಿ ಪಂಜಾಬ್ ಮತ್ತು ಉತ್ತರಾಖಂಡ್ ಪೊಲೀಸ್ ತಂಡವು ಆರೋಪಿಯನ್ನು ಬಂಧಿಸಿದಾಗ ಹೇಮಕುಂಡ್ ಸಾಹಿಬ್ ಯಾತ್ರೆಯ ಭಾಗವಾಗಿರುವ ಯಾತ್ರಾರ್ಥಿಗಳ ನಡುವೆ ಅಡಗಿಕೊಂಡಿದ್ದನು ಎಂದು ತಿಳಿದು ಬಂದಿದೆ. ಸೋಮವಾರ ಪೊಲೀಸರು ಬಂಧಿಸಿದ ಆರು ಮಂದಿ ಆರೋಪಿಗಳಲ್ಲಿ ಮನ್ಪ್ರೀತ್ ಕೂಡ ಒಬ್ಬರಾಗಿದ್ದಾರೆ.