fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ʻದೂರುದಾರರು & ಆರೋಪಿ ನಡುವೆ ರಾಜಿಯಾದ್ರೆ ಅತ್ಯಾಚಾರ ಪ್ರಕರಣ ಮುಕ್ತಾಯಗೊಳಿಸಬಹುದುʼ: ಹೈಕೋರ್ಟ್‌ ಮಹತ್ವದ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ‘ಅತ್ಯಾಚಾರ ಆರೋಪ ಪ್ರಕರಣದಲ್ಲಿ ದೂರುದಾರ ಮಹಿಳೆ ಮತ್ತು ಆರೋಪಿಗಳ ನಡುವೆ ರಾಜಿಯಾದರೆ ವಿಚಾರಣೆ ಮುಕ್ತಾಯಗೊಳಿಸಬಹುದು’ ಎಂದು ಹೈಕೋರ್ಟ್‌ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ದೂರುದಾರರು ಮತ್ತು ಆರೋಪಿಗಳ ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನೂ ಮುಕ್ತಾಯಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿದೆ.

 

ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿಗಳಾದ ಕೆ ಸತೀಶ್, ಶ್ರೀನಿವಾಸ್, ಕೋಕಿಲ ಮತ್ತು ಮಮತಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮನವಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಈ ಆದೇಶ ಮಾಡಿದೆ.

ತಮ್ಮ ಕುಟುಂಬದ ಸದಸ್ಯರ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ದೂರುದಾರಳು ವಿವಾಹಿತೆಯಾಗಿದ್ದು, ಗಂಡನ ಜೊತೆಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಆರೋಪಿಗಳು ದೂರುದಾರಳ ಕುಟುಂಬದ ಸದಸ್ಯರೇ ಆಗಿದ್ದು, ಆರೋಪಿಗಳು ಮತ್ತು ದೂರುದಾರರು ರಾಜಿಯಾಗಲು ಸಲ್ಲಿಸಿರುವ ಮೆಮೊವನ್ನು ಪರಿಗಣಿಸಬಹುದಾಗಿದೆ’ ಎಂದು ಹೇಳಿದೆ.

 

‘ಅತ್ಯಾಚಾರ ಪ್ರಕರಣದಲ್ಲಿ ಉಭಯ ಪಕ್ಷದವರು ರಾಜಿಯಾಗಲು ಒಪ್ಪಿದ ಸಂದರ್ಭದಲ್ಲಿ ಆ ಪ್ರಕರಣವನ್ನು ನ್ಯಾಯಾಲಯ ಮುಕ್ತಾಯಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲಾಗಿದೆ’ ಎಂದು ನ್ಯಾಯಪೀಠ ಆದೇಶಿಸಿದೆ.

ಸತೀಶ್ ವಿರುದ್ಧ ಅತ್ಯಾಚಾರ ಹಾಗೂ ಉಳಿದ ಮೂವರು ಆರೋಪಿಗಳ ವಿರುದ್ಧ ಜೀವ ಬೆದರಿಕೆ, ಅವಮಾನ ಮತ್ತು ವಸೂಲಿ ಆರೋಪ ಮಾಡಿದ್ದ ಮಹಿಳೆಯೊಬ್ಬರು 2022ರ ಫೆಬ್ರವರಿ 16ರಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಎಲ್ಲ ಆರೋಪಿಗಳು ಮತ್ತು ದೂರುದಾರ ಮಹಿಳೆ ಹೈಕೋರ್ಟ್‌ಗೆ ಹಾಜರಾಗಿ, ‘ಪ್ರಕರಣವನ್ನು ರಾಜಿ ಮೂಲಕ ಮುಕ್ತಾಯಗೊಳಿಸಲು ಉದ್ದೇಶಿಸಿದ್ದೇವೆ’ ಎಂಬ ಜಂಟಿ ಮೆಮೊ ಸಲ್ಲಿಸಿದರು. ಅದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣವನ್ನು ವಿಲೇವಾರಿ ಮಾಡಿದೆ. ಆರೋಪಿಗಳ ಪರ ಡಿ.ಮೋಹನಕುಮಾರ್ ಹಾಗೂ ದೂರುದಾರ ಮಹಿಳೆಯ ಪರ ಕೆ.ರಾಘವೇಂದ್ರಗೌಡ ಹಾಜರಾಗಿದ್ದರು.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: