Karnataka News
BIGG NEWS : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ನುಗ್ಗಿ ದಾಂಧಲೆ ಕೇಸ್ : ಈವರೆಗೆ 22 ಆರೋಪಿಗಳು ಅರೆಸ್ಟ್
ತುಮಕೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಈವರೆಗೆ 22 ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ನಿವಾಸಕ್ಕೆ ನುಗ್ಗಿ ಎನ್ಎಸ್ಯುಐ ಕಾರ್ಯಕರ್ತರು ದಾಂಧಲೆ ನಡೆಸಿರುವ ಹಿನ್ನೆಲೆಯಲ್ಲಿ ಸಚಿವ ಬಿ.ಸಿ.ನಾಗೇಶ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪಟೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು, ಈವರೆಗೆ 22 ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು, ಹಾಸನ, ದಾವಣಗೆರೆ, ಬೆಂಗಳೂರು, ತುಮಕೂರಿನವರು ಎಂದು ಮಾಹಿತಿ ಲಭ್ಯವಾಗಿದೆ.