BIGG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಮಾತ್ರ ಕೆಲಸ ಮಾಡ್ತಿದ್ದಾರೆ ಎಂದ ಹೈಕಮಾಂಡ್;ಹಾಗಾದ್ರೆ ಸಿದ್ದರಾಮಯ್ಯ ಸಹಿತ ಉಳಿದವರು ಏನ್ ಮಾಡ್ತಿದ್ದಾರಂತೆ ಗೊತ್ತಾ..?

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಡಿ.ಕೆ.ಶಿವಕುಮಾರ್ ಮಾತ್ರ ಸಕ್ರಿಯರಾಗಿದ್ದಾರೆ..ಆದರೆ ಉಳಿದವರು..?
ಹೀಗೊಂದು ವಿಚಾರವನ್ನು ಸ್ವತಃ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸಿಂಗ್ ಸುರ್ಜೆವಾಲ ಬಹಿರಂಗಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರೋ ಅವರು, ಪಕ್ಷದ ಸಂಘಟನೆಯಲ್ಲಿ ಶಿವಕುಮಾರ್ ಸಕ್ರಿಯರಾಗಿದ್ದಾರೆ.. ಆದರೂ ಪಿಸಿಸಿ ಅಧಿವೇಶನಗಳು , ಡಿಸಿಸಿ ಸಭೆಗಳು ನಡೆಯುತ್ತಿಲ್ಲ ಎಂದು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನು ಅಧ್ಯಕ್ಷರು ತಮ್ಮ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಜತೆಗೂಡಿ ಚರ್ಚೆ ಮಾಡಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ನಡೆಯಬೇಕು.6 ತಿಂಗಳಿಗೊಮ್ಮೆ ವರ್ಷಕ್ಕೆ ಎರಡು ಬಾರಿ ಪ್ರದೇಶ ಕಾಂಗ್ರೆಸ್ ಸಮಿತಿಯ ಸಭೆ ನಡೆಸಬೇಕು. ಇಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.
ಅದೇ ರೀತಿ ಪಿಸಿಸಿ ಹಾಗೂ ಡಿಸಿಸಿ ರಾಜಕೀಯ ವಿಚಾರ ಚರ್ಚೆ ಮಾಡುವುದರ ಜತೆಗೆ ಜನ ಸಾಮಾನ್ಯರು ಹಾಗೂ ನಿರ್ದಿಷ್ಟ ವರ್ಗದವರನ್ನು ಕಾಡುತ್ತಿರುವ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕು. ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರ ವಿಚಾರಗಳನ್ನು ಚರ್ಚೆ ಮಾಡಲು ಪ್ರತ್ಯೇಕ ಅಧಿವೇಶನ ನಡೆಸಬೇಕು ಎಂದೆಲ್ಲಾ ಸಲಹೆ ಸೂಚನೆಗಳನ್ನು ರಾಜ್ಯ ಕಾಂಗ್ರೆಸ್ಸಿಗರಿಗೆ ನೀಡಿದ್ದಾರೆ.
ಇನ್ನುಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ನೀಡುತ್ತಿದೆ. ಇದರ ಜತೆಗೆ ಪಕ್ಷದ ನಾಯಕರು ಮಾಧ್ಯಮಗಳ ಮುಂದೆ ಪಕ್ಷಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕಿದೆ. ನಿಮ್ಮ ಪ್ರಚಾರಕ್ಕೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಮೂಲಕ ಪಕ್ಷಕ್ಕೆ ಹಾಗೂ ನಿಮಗೆ ತೊಂದರೆ ಆಗುವಂತೆ ಮಾಡಬೇಡಿ. ನಿಮ್ಮ ಭಿನ್ನಾಭಿಪ್ರಾಯಗಳನ್ನು ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚೆಮಾಡಿ ಎಂದು ಡಿಕೆಶಿ,ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ