fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

BREAKING NEWS: ರಾಜ್ಯಸಭೆ ಚುನಾವಣೆ: ನಾಮಪತ್ರ ವಾಪಾಸ್ ಅವಧಿ ಮುಕ್ತಾಯ, ಕಣದಲ್ಲಿ 6 ಅಭ್ಯರ್ಥಿಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ರಾಜ್ಯಸಭೆ ಚುನಾವಣೆಗಾಗಿ ( Rajya Sabha Election ) ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಆದ್ರೇ.. ಯಾವುದೇ ಪಕ್ಷದ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ( Nomination ) ಹಿಂಪಡೆಯದ ಕಾರಣ, ಅಂತಿಮವಾಗಿ ಕಣದಲ್ಲಿ 6 ಅಭ್ಯರ್ಥಿಗಳು ಇದ್ದಾರೆ.

 

ಜೂನ್ 10ರಂದು ನಡೆಯಲಿರುವಂತ ರಾಜ್ಯಸಭೆಯ ಚುನಾವಣೆಗೆ ಇಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಹೊಂದಾಣಿಕೆಯೊಂದಿಗೆ, ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಯು ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ.. ಕಾಂಗ್ರೆಸ್ ಪಕ್ಷದ ಸಿಎಲ್ಪಿ ನಾಯಕ ಸಿದ್ಧರಾಮಯ್ಯ ಮಾತ್ರ ನಾವು ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು. ಹೀಗಾಗಿ ಜೆಡಿಎಸ್ ನಾಯಕರು ನಡೆಸಿದಂತ ಅಂತಿಮ ಹಂತದ ಕಸರತ್ತು ಠುಸ್ ಆಗಿತ್ತು.

 

ಇದೀಗ ನಾಮಪತ್ರ ಹಿಂಪಡೆಯುವಂತ ಅವಧಿ ಮುಕ್ತಾಯಗೊಂಡಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ಚುನಾವಣಾ ಕಣದಲ್ಲಿ ಬಿಜೆಪಿಯ ಮೂವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ಪಕ್ಷದ ಒಬ್ಬರು ಸೇರಿದಂತೆ 6 ಮಂದಿ ಉಳಿದಿದ್ದಾರೆ. ಬಿಜೆಪಿ ಪಕ್ಷದಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಹಾಗೂ ಲೇಹರ್ ಸಿಂಗ್ ಕಣದಲ್ಲಿದ್ದರೇ, ಕಾಂಗ್ರೆಸ್ ನಿಂದ ಜೈರಾಂ ರಮೇಶ್ ಹಾಗೂ ಮನ್ಸೂರ್ ಆಲಿ ಖಾನ್ ನಿಂತಿದ್ದಾರೆ. ಜೆಡಿಎಸ್ ಪಕ್ಷದಿಂದ ಕುಪೇಂದ್ರ ರೆಡ್ಡಿ ಕಣದಲ್ಲಿ ಇದ್ದಾರೆ. ಬಿಜೆಪಿಯ ಮೂರನೇ ಅಭ್ಯರ್ಥಿ, ಕಾಂಗ್ರೆಸ್ ನ ಎರಡನೇ ಅಭ್ಯರ್ಥಿ ಹಾಗೂ ಜೆಡಿಎಸ್ ಪಕ್ಷದ ಓರ್ವ ಅಭ್ಯರ್ಥಿ ಗೆಲ್ಲೋದಕ್ಕೆ ಮತ್ತೊಂದು ಪಕ್ಷದ ಬೆಂಬಲಿತ ಮತಗಳ ಅಗತ್ಯವಿದೆ. ಹಾಗಾದ್ರೇ.. ಯಾವ ಪಕ್ಷದ ನಾಯಕರು, ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದ್ದಾರೆ ಎನ್ನುವುದು ಜೂನ್ 10ರಂದು ತಿಳಿಯಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: