fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsMake MoneyNational

ಜೂನ್ 6ರಂದು ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ನವದೆಹಲಿ, ಜೂನ್ 6: ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭಿಸಿದ್ದ ಸರ್ಕಾರಿ ತೈಲ ಕಂಪನಿಗಳು, ಕಳೆದ ಮೂರು ದಿನಗಳಿಂದ ಪೆಟ್ರೋಲ್-ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ಜೂನ್ 6ರಂದು ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ.

 

ಭಾರತದಲ್ಲಿ ನಾಲ್ಕೂವರೆ ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ದೇಶದಲ್ಲಿ ಮಾರ್ಚ್ 22ರ ನಂತರದಲ್ಲಿ ಬರೋಬ್ಬರಿ 15 ಬಾರಿ ಏರಿಕೆ ಕಂಡಿದ್ದ ಇಂಧನ ದರವನ್ನು ಕೇಂದ್ರ ಸರ್ಕಾರ ಇಳಿಸಿದೆ. ಮೇ 21ರ ಶನಿವಾರ ಪೆಟ್ರೋಲ್ ಮೇಲೆ 8 ರೂಪಾಯಿ, ಡೀಸೆಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದೆ. ಇದರಿಂದ ಪೆಟ್ರೋಲ್ ಬೆಲೆಯಲ್ಲಿ 9.50 ರೂಪಾಯಿ ಹಾಗೂ ಡೀಸೆಲ್ ದರದಲ್ಲಿ 7 ರೂಪಾಯಿ ಇಳಿಕೆಯಾಗಿದೆ.

 

ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಸಹ ಇಂಧನ ದರವನ್ನು ಇಳಿಸಿವೆ. ಜೂನ್ 6ರ ಅಂಕಿ-ಅಂಶಗಳ ಪ್ರಕಾರ, ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 96.72 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.62 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.28 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.63 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.24 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.03 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 92.76 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಇಂಧನ ದರ ಹೇಗಿದೆ?

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.82 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 107.40 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 96.23 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.76 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 87.89 ರೂಪಾಯಿ ದಾಖಲಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ವಿಶ್ವ ಮಟ್ಟದಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಹೇಗೆ?

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಇಂದು ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 119.80 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: