EducationKarnataka News
BIGG NEWS : ರಾಜ್ಯದಲ್ಲಿ ನಿಲ್ಲದ `ಹಿಜಾಬ್ ವಿವಾದ’ : 24 ವಿದ್ಯಾರ್ಥಿನಿಯರಿಗೆ 1 ವಾರ ಕಾಲೇಜಿಗೆ ನಿರ್ಬಂಧ

ಮಂಗಳೂರು : ರಾಜ್ಯದಲ್ಲಿ ಮತ್ತೆ ಕೆಲದಿನಗಳಿಂದ ಹಿಜಾಬ್ ವಿವಾದ ಶುರುವಾಗಿದ್ದು, ಮಂಗಳೂರು ವಿವಿ ಘಟಕ ಕಾಲೇಜು ಮತ್ತು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರವೂ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ.
ಹಿಜಾಬ್ ಧರಿಸಿ ಬಂದ ಹಲವು ವಿದ್ಯಾರ್ಥಿನಿಯರಿಗೆ ಈಗಾಗಲೇ ಅಮಾನತು ಮಾಡಲಾಗಿತ್ತು. ಇದೀಗ ಮತ್ತೆ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಮೂವರು ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟಿಸ್ ನೀಡಿದ್ದಾರೆ. ಉಪ್ಪಿನಂಗಡಿ ಕಾಲೇಜಿನ 24 ವಿದ್ಯಾರ್ಥಿನಿಯರಿಗೆ ಒಂದು ವಾರ ಕಾಲ ತರಗತಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹಿಜಾಬ್ ತೆಗೆದಿಟ್ಟು ತರಗತಿಗೆ ಹಾಜರಾಗುವಂತೆ ಸೂಚನೆ ನೀಡಿದರೂ ಹಿಜಾಬ್ ತೆಗೆಯದ 24 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿಗೆ ನಿರ್ಬಂಧ ಹೇರಲಾಗಿದೆ.