fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ

ನಿಪ್ಪಾಣಿ – ನಿಪ್ಪಾಣಿ ತಾಲೂಕಿನ ಮಾಂಗೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಸಂಜೆ ಉದ್ಘಾಟಿಸಿದರು.

ಸ್ವತಃ ಬ್ಯಾಟ್ ಹಿಡಿದು ಕ್ರಿಕೆಟ್ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದ ಚನ್ನರಾಜ, ಇಂದಿನ ಯುವ ಪೀಳಿಗೆ ಮನೆಯಿಂದ ಹೊರಗೆ ಬಂದು ಆಟವಾಡುವುದನ್ನು ಕಾಣುವುದೇ ಅಪರೂಪವಾಗಿದೆ. ಕೈಯಲ್ಲಿ ಮೊಬೈಲ್ ಹಿಡಿದರೆ ಪ್ರಪಂಚವನ್ನೇ ಮರೆಯುವ ದಿನಗಳಿವು. ಇಂತಹ ಸಂದರ್ಭದಲ್ಲಿ ಯುವಕರು ಇಂತಹ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವುದು ನಿಜವಾಗಿ ಖುಷಿಯ ಸಂಗತಿ ಎಂದು ಹೇಳಿದರು.

ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಮತ್ತು ಕೇಂದ್ರ ಸರಕಾರ ಇನ್ನಷ್ಟು ಪ್ರೋತ್ಸಾಹ, ಆದ್ಯತೆ ನೀಡಬೇಕಿದೆ. ಈ ದಿಸೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತಲಾಗುವುದು. ಪಠ್ಯ ಚಟುವಟಿಕೆಗಳಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ಸಿಗಬೇಕೆನ್ನುವುದು ನಮ್ಮ ಧ್ಯೇಯವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.

 

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಾಜಿ ಶಾಸಕರಾದ ಕಾಕಾಸಾಹೇಬ್ ಪಾಟೀಲ, ಸುಭಾಷ್ ಜೋಷಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪ್ರದೀಪ ಜಾಧವ್, ರಮೇಶ ಜಾಧವ್, ರಾಜು ಬಿಚಡೆ ಮೊದಲಾದವರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: