fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

ಜೆಡಿಎಸ್-ಕಾಂಗ್ರೆಸ್ ನಡುವೆ ದೋಸ್ತಿ, ಬಿಜೆಪಿಗೆ ಕಾದಿದೆಯಾ ಶಾಕ್..?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು,ಜೂ.8- ರಾಜ್ಯಸಭೆ ಚುನಾವಣೆಯ ಮತದಾನಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಸ್ಪೋಟಕ ತಿರುವು ಸಿಕ್ಕಿದ್ದು, ಹಾವು-ಮುಂಗುಸಿಯಂತಿದ್ದ ಜೆಡಿಎಸ್-ಕಾಂಗ್ರೆಸ್ ಕೊಡುವ, ತೆಗೆದುಕೊಳ್ಳುವ ಲೆಕ್ಕಾಚಾರದಲ್ಲಿವೆ.

ಒಂದು ವೇಳೆ ಕೊನೆ ಕ್ಷಣದಲ್ಲಿ ಇದು ಯಶಸ್ವಿಯಾದರೆ ರಾಜ್ಯಸಭೆ ಚಿತ್ರಣವೇ ಬದಲಾಗಿದ್ದು, ಈವರೆಗೂ ಗೆದ್ದೇ ಗೆಲ್ಲುತ್ತೇವೆ ಎಂದು ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಹಿನ್ನಡೆಯಾದರೂ ಅಚ್ಚರಿ ಇಲ್ಲ.

ಕೋಮುವಾದಿ ಪಕ್ಷವನ್ನು ಗೆಲ್ಲಿಸಲೇಬಾರದೆಂಬ ಒಂದು ಸಾಲಿನ ತೀರ್ಮಾನಕ್ಕೆ ಬಂದಿರುವ ಉಭಯ ಪಕ್ಷಗಳ ನಾಯಕರು 4ನೇ ಅಭ್ಯರ್ಥಿಗೆ ಕೊಟ್ಟು ತೆಗೆದುಕೊಳ್ಳುವ ಲೆಕ್ಕಾಚಾರಕ್ಕೆ ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈವರೆಗೂ ಬೆಂಕಿ ಉಗುಳುತ್ತಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಉರುಳಿಸಿರುವ ಒಂದೇ ಒಂದು ದಾಳ ರಾಜ್ಯಸಭೆ ಚುನಾವಣೆಯ ಚಿತ್ರಣವನ್ನೇ ಬದಲಾಯಿಸಿದೆ ಎನ್ನಲಾಗುತ್ತಿದೆ.

ಇಬ್ಬರ ಜಗಳದಲ್ಲಿ 3ನೇಯವರಿಗೆ ಲಾಭವಾಗಬಾರದು ಎಂಬ ತೀರ್ಮಾನಕ್ಕೆ ಬಂದಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಪರಸ್ಪರ ಕೊಟ್ಟು-ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿರುವುದರಿಂದ ಚುನಾವಣಾ ಕಾವು ರಂಗೇರುವಂತೆ ಮಾಡಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕುಪೇಂದ್ರ ರೆಡ್ಡಿಗೆ ತನ್ನ 32 ಮತಗಳನ್ನು ಹಾಕಿಸಿಕೊಳ್ಳುವುದು, ಕಾಂಗ್ರೆಸ್ ಬಳಿ ಇರುವ ಹೆಚ್ಚುವರಿ 2ನೇ ಪ್ರಾಶಸ್ತ್ಯದ 26 ಮತಗಳನ್ನು ಜೆಡಿಎಸ್‍ಗೆ ವರ್ಗಾಯಿಸುವುದು, ಇದೇ ರೀತಿ ಕಾಂಗ್ರೆಸ್‍ನ 2ನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿಖಾನ್‍ಗೆ ಮೊದಲ 26 ಮತಗಳ ನಂತರ 2ನೇ ಪ್ರಾಶಸ್ತ್ಯದ ಜೆಡಿಎಸ್‍ನ 32 ಮತಗಳನ್ನು ಹಾಕಿಸಿಕೊಳ್ಳಬೇಕೆಂಬ ಲೆಕ್ಕಾಚಾರಕ್ಕೆ ಬರಲಾಗಿದೆ.

ಇದರಿಂದ ಸುಲಭವಾಗಿ ಜೆಡಿಎಸ್‍ನ ಕುಪೇಂದ್ರ ರೆಡ್ಡಿ ಗೆಲುವು ಸಾಧಿಸಲಿದ್ದು, ಬಿಜೆಪಿಯ 3ನೇ ಅಭ್ಯರ್ಥಿ ಲೆಹರ್‍ ಸಿಂಗ್‍ಗೆ ಹಿನ್ನಡೆಯಾಗುವ ಸಂಭವವ ಹೆಚ್ಚಾಗಿದೆ ಎಂಬ ಲೆಕ್ಕಾಚಾರಗಳು ಕೇಳಿಬಂದಿವೆ.

ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದರೆ ಕಾಂಗ್ರೆಸ್ ತನ್ನ 2ನೇ ಪ್ರಾಶಸ್ತ್ಯದ ಮತಗಳನ್ನು ನಮಗೆ ಹಾಕಬೇಕೆಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು ಎಂಬ ಕಾರಣಕ್ಕಾಗಿಯೇ ನಮ್ಮ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್‍ಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎಂದಿದ್ದಾರೆ.

# ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿ:
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಜಾತ್ಯತೀತ ಶಕ್ತಿಗಳು ಒಂದಾಗಿ ಕೋಮುವಾದಿಯನ್ನು ಸೋಲಿಸಬೇಕು ಎಂಬ ಬದ್ದತೆ ಇದ್ದರೆ ಜೆಡಿಎಸ್‍ನವರೇ ತಮ್ಮ ಅಭ್ಯರ್ಥಿಯನ್ನು ನಿವೃತ್ತಗೊಳಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಿ ಎಂದು ಒತ್ತಾಯಿಸಿದರು.

#ನಾವೇಕೆ ಹಿಂಪಡೆಯಬೇಕು:

ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನಮ್ಮ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಈ ಮಣ್ಣಿನ ಮಗ. ನಾವು ಈಗಾಗಲೇ ಕಣಕ್ಕಿಳಿಸಿದ್ದೇವೆ. ಇಷ್ಟೆಲ್ಲ ಬೆಳವಣಿಗೆಯಾದ ಮೇಲೆ ಕಣದಿಂದ ಏಕೆ ಹಿಂದೆ ಸರಿಯಬೇಕು ಎಂದು ಪ್ರಶ್ನೆ ಮಾಡಿದರು.

ಮಾಜಿ ಸಚಿವ ರೇವಣ್ಣ ಕೂಡ ಕಾಂಗ್ರೆಸ್ ಜೊತೆ ಮೈತ್ರಿಗೆ ಒಲವು ತೋರಿದ್ದು, ಕೋಮುವಾದಿಗಳನ್ನು ಸೋಲಿಸಬೇಕೆಂದರೆ ನಮ್ಮಲ್ಲಿರುವ ವೈಮನಸ್ಸುಗಳನ್ನು ಮರೆತು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಕುಪೇಂದ್ರ ರೆಡ್ಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: