fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
EducationKarnataka News

ಇಂದಿನಿಂದ ಪಿಯು ಕಾಲೇಜು ಶುರು: ಸಮವಸ್ತ್ರ ಕಡ್ಡಾಯ- ಹಿಜಾಬ್‌ ಗಲಾಟೆಗೆ ಅವಕಾಶವಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ‌ 9) ಪಿಯುಸಿ ತರಗತಿಗಳು ಆರಂಭವಾಗಲಿವೆ. ಸರ್ಕಾರದ ನಿಯಮ, ಹೈಕೋರ್ಟ್‌ ಆದೇಶಗಳ ಹೊರತಾಗಿಯೂ ತರಗತಿಗಳಲ್ಲಿ ಹಿಜಾಬ್‌ ಧರಿಸಿ ಗಲಾಟೆ ಮಾಡುತ್ತಿರುವವರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ರಾಜ್ಯ ಶಿಕ್ಷಣ ಇಲಾಖೆ ಸಮವಸ್ತ್ರ ಧರಿಸುವಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಆಗಮಿಸಲು ಅವಕಾಶ ಇರುವುದಿಲ್ಲ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಹೇಳಿದೆ.

ಕಾಲೇಜಿನ ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರವನ್ನೇ ಧರಿಸಬೇಕು. ಒಂದು ವೇಳೆ ಕಾಲೇಜು ಅಭಿವೃದ್ಧಿ ಮಂಡಳಿ ಅಥವಾ ಆಡಳಿತ ವರ್ಗ ಸಮವಸ್ತ್ರ ಕಡ್ಡಾಯಗೊಳಿಸದಿದ್ದರೆ ವಿದ್ಯಾರ್ಥಿಗಳು ಸಮಾನತೆ ಮತ್ತು ಏಕತೆ ಕಾಪಾಡುವಂತಹ ಉಡುಪು ಧರಿಸಬೇಕು. ಸಾರ್ವಜನಿಕ ವ್ಯವಸ್ಥೆಗೆ ಧಕ್ಕೆಯಾಗುವಂತಹ ಬಟ್ಟೆ ಧರಿಸಲು ಅವಕಾಶವಿಲ್ಲ ಎಂದು ಇದಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಪಿಯು ಕಾಲೇಜು ಆಡಳಿತ ಮಂಡಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.

ಹಿಜಾಬ್ ವಿವಾದದ ಕುರಿತ ವಿಚಾರಣೆ ಸುಪ್ರಿಂ ಕೋರ್ಟ್​ನಲ್ಲಿ ಬಾಕಿಯಿದ್ದು, ರಾಜ್ಯ ಸರ್ಕಾರವು ಹೈಕೋರ್ಟ್ ತೀರ್ಪಿನ ಪ್ರಕಾರ ಹಿಜಾಬ್​ನಂತಹ ಉಡುಪು ಧರಿಸಲು ಅವಕಾಶ ನೀಡದೇ, ಸಮವಸ್ತ್ರ ಧಾರಣೆ ಕಡ್ಡಾಯಗೊಳಿಸಿ ಮಾರ್ಗಸೂಚಿ ರೂಪಿಸಿದೆ.ಇನ್ನು ಪಿಯು ಕಾಲೇಜುಗಳಿಗೆ ಶೈಕ್ಷಣಿಕ ವೇಳಾಪಟ್ಟಿಯನ್ನ ಸಹ ಸಾರ್ವಜನಿಕ ಶಿಕ್ಷಣ ಇಲಾಖೆ ನಿಗದಿಪಡಿಸಿದೆ.

ಜೂನ್ 9 ರಿಂದ ಸೆಪ್ಟೆಂಬರ್ 30 ರವರೆಗೆ ಕಾಲೇಜು ಕಾರ್ಯನಿರ್ವಹಿಸಲಿದೆ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ. ಅಕ್ಟೋಬರ್ 13 ರಿಂದ ಮಾರ್ಚ್ 31 ರವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ. ಏಪ್ರಿಲ್ ಒಂದರಿಂದ ಬೇಸಿಗೆ ರಜೆ ಎಂದು ಸದ್ಯ ನೀಡಿರುವ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: