Karnataka News
BIG NEWS: KSRTC ಬಸ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ; ವಿದ್ಯಾರ್ಥಿಗಳು ಸೇರಿ 20 ಜನರಿಗೆ ಗಾಯ
ಬೆಳಗಾವಿ: ಕಾಲೇಜು ಬಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯಗಾಳಿರುವ ಘಟನೆ ಬೆಳಗಾವಿ ಜಿಲ್ಲೆ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮೂಡಲಗಿ ಪಟ್ಟಣದಲ್ಲಿರುವ ಖಾಸಗಿ ಕಾಲೇಜಿನ ಬಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ.
ವಿದ್ಯಾರ್ಥಿಗಳು ಸೇರಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿದ್ಯಾರ್ಥಿಗಳನ್ನು ಬಸ್ ಗೆ ಹತ್ತಿಸಿಕೊಳ್ಳಲು ರಸ್ತೆ ಬದಿ ನಿಂತಿದ್ದ ಕಾಲೇಜು ಬಸ್ ಗೆ ಹಿಂಬದಿಯಿಂದ ಬಂದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.