Karnataka News
ಬೆಳಗಾವಿಯಲ್ಲಿ ನೋಪುರ್ ಶರ್ಮಾ ಪ್ರತಿಕೃತಿ ನೇಣು ಹಾಕಿದ ಕಿಡಿಗೇಡಿಗಳು

ಬೆಳಗಾವಿ : ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಪ್ರತಿಕೃತಿಯನ್ನು ಕಿಡಿಗೇಡಿಗಳು ನಡುರಸ್ತೆಯಲ್ಲೇ ನೇತುಹಾಕಿರುವ ಘಟನೆ ಬೆಳಗಾವಿ ನಗರದ ರೈಲ್ವೆ ನಿಲ್ದಾಣದ ಪೋರ್ಟ್ ರಸ್ತೆಯಲ್ಲಿ ನಡೆದಿದೆ.
ಕೇಸರಿ ಸೀರೆ ಹಾಕಿ ನೂಪುರ್ ಶರ್ಮಾರ ಭಾವಚಿತ್ರ ಹಚ್ಚಿ, ರಸ್ತೆಯ ಎರಡು ಬದಿಗಳಲ್ಲಿ ಕಟ್ಟಡಗಳ ಮೇಲೆ ಪ್ರತಿಕೃತಿಯನ್ನು ನೇತು ಬಿಡಲಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದ್ದು, ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ಪ್ರತಿಕೃತಿ ತೆರವುಗೊಳಿಸಿದ್ದಾರೆ.
ಘಟನೆ ಸಂಬಂಧ ಸೇರಿದಂತೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.