Karnataka NewsPolitics
ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು: ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಶುಕ್ರವಾರ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಮತ ಚಲಾಯಿಸಿದರು.
ರಾಜ್ಯಸಭೆ ಚುನಾವಣೆಯ ಹಿನ್ನೆಲೆ ವಿಧಾನಸೌಧದಲ್ಲಿ ಬಿರುಸಿನ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ನಿಂದ ಜಯರಾಮ್ ರಮೇಶ್ ಮತ್ತು ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಆಲಿ ಖಾನ್ ಅಭ್ಯರ್ಥಿಗಳ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮತ ಚಲಾಯಿಸಿದರು. ಇಂದು ಒಟ್ಟು 69 ಕಾಂಗ್ರೆಸ್ ಶಾಸಕರು ತಮ್ಮಹಕ್ಕು ಚಲಾಯಿಸಿದರು. ಈ ಸಂಜೆ 6ರ ಬಳಿಕ ಮತ ಎಣಿಕೆ ಆರಂಭವಾಗಲಿದ್ದು, ರಾತ್ರಿ ವೇಳೆಗೆ ಫಲಿತಾಂಶ ಘೋಷಣೆಯಾಗಲಿದೆ.