fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಶಾಲಾ- ಕಾಲೇಜು, ಬ್ಯಾಂಕ್​, ಸರ್ಕಾರಿ ಕಚೇರಿಗಳಿಗೆ ರಾಜ್ಯದ ಹಲವೆಡೆ ನಾಳೆ ರಜೆ: ವಿವರ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

 

ವಿಧಾನ ಪರಿಷತ್ ಮತ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾಸಂಸ್ಥೆಗಳು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯಾವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತಚಲಾಯಿಸಲಿರುವ ಮತದಾರರಿಗೆ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಆದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಎಲ್ಲೆಲ್ಲಿ ನಡೆಯಲಿವೆ ಚುನಾವಣೆಗಳು?

*ಕರ್ನಾಟಕ ವಾಯವ್ಯ ಪದವೀಧರರ ಕ್ಷೇತ್ರ – ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.

*ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ – ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು.

*ಕರ್ನಾಟಕ ವಾಯವ್ಯ ಕ್ಷೇತ್ರ ಶಿಕ್ಷಕರ ಕ್ಷೇತ್ರ- ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು.

*ಕರ್ನಾಟಕ ಪಶ್ಚಿಮ ಕ್ಷೇತ್ರ ಶಿಕ್ಷಕರ ಕ್ಷೇತ್ರ- ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು.

ಇದರ ಅರ್ಥ ಕರ್ನಾಟಕದ ವಿಜಯಪುರ, ಬಾಗಲಕೋಟೆ , ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ , ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗಳು ನಡೆಯುತ್ತಿದ್ದು ಮತದಾನದ ಅನೂಕೂಲಕ್ಕಾಗಿ ವಿಶೇಷ ಸಾಂದರ್ಭಿಕ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: