fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka NewsPolitics

190 ಮತಗಟ್ಟೆಗಳಲ್ಲಿ ಮತದಾನ: ಜೂನ್‌ 13ರಂದು ನಡೆಯಲಿದೆ. ಸೋಮವಾರ ಬೆಳಿಗ್ಗೆ 8ರಿಂದ ಸಂಜೆ 5ರ ವರೆಗೂ ಮತದಾರರಿಗೆ ಹಕ್ಕು ಚಲಾಯಿಸಲು ಸಮಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಳಗಾವಿ: ವಿಧಾನ ಪರಿಷತ್‌ನ ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾನ ಪ್ರಕ್ರಿಯೆ ಜೂನ್‌ 13ರಂದು ನಡೆಯಲಿದೆ. ಸೋಮವಾರ ಬೆಳಿಗ್ಗೆ 8ರಿಂದ ಸಂಜೆ 5ರ ವರೆಗೂ ಮತದಾರರಿಗೆ ಹಕ್ಕು ಚಲಾಯಿಸಲು ಸಮಯ ನೀಡಲಾಗಿದೆ.

ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರು ಭಾನುವಾರ ವಿವಿಧ ಮತಗಟ್ಟೆಗಳು ಹಾಗೂ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಮತದಾನ ಕಾಲಕ್ಕೆ ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದು, ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಸಿದ್ಧವಾಗಬೇಕು ಎಂದು ಅವರು ಸಿಬ್ಬಂದಿಗೆ ಸೂಚಿಸಿದರು.

ಸಹಾಯಕ ಚುನಾವಣಾ ಅಧಿಕಾರಿಯೂ ಆದ, ಪಾಲಿಕೆ ಆಯುಕ್ತ ರುದ್ದೇಶ ಘಾಳಿ ಅವರು, ಮತಪೆಟ್ಟಿಗೆಗಳ ‘ಮಸ್ಟರಿಂಗ್‌’ ಹಾಗೂ ‘ಡಿ ಮಸ್ಟರಿಂಗ್‌’ ತರಬೇತಿ ನೀಡಿದರು. ಮತಗಟ್ಟೆಗಳಿಗೆ ಮತಪೆಟ್ಟಿಗೆಗಳನ್ನು ಸಾಗಿಸುವ ರೀತಿ, ಮತದಾನ ವೇಳೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಮತಪೆಟ್ಟಿಗೆಯನ್ನು ಶೀಲ್‌ ಮಾಡುವ ಪದ್ಧತಿ ಸೇರಿದಂತೆ ಎಲ್ಲ ಹಂತದ ತರಬೇತಿ ನೀಡಿದರು.

ನಗರವೂ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರ್‌ ಕಚೇರಿಗಳಿಂದ ಮತಪೆಟ್ಟಿಗೆಗಳನ್ನು ಆಯಾ ಬೂತ್‌ಗಳಿಗೆ ಸಾಗಿಸಲಾಯಿತು. ಇದಕ್ಕೂ ಮುನ್ನ ಇಲ್ಲಿನ ಜ್ಯೋತಿ ಕಾಲೇಜಿನ ಮತ ಎಣಿಕೆ ಕೇಂದ್ರ ಹಾಗೂ ಆಯಾ ತಾಲ್ಲೂಕುಗಳ ತಹಶೀಲ್ದಾರ್‌ ಕಚೇರಿಗಳಿಗೆ ಭಾನುವಾರ ಬೆಳಿಗ್ಗೆ ಬಂದಿದ್ದ ಚುನಾವಣೆ ಸಿಬ್ಬಂದಿ, ಮತಪತ್ರ, ಮತಪೆಟ್ಟಿಗೆ ಹಾಗೂ ಇತರ ಸಾಮಗ್ರಿಗಳೊಂದಿಗೆ ವಾಹನಗಳಲ್ಲಿ ಮತಗಟ್ಟೆಗಳಿಗೆ ಹೊರಟರು.

1,548 ಸಿಬ್ಬಂದಿ ನಿಯೋಜನೆ: ಹಿರಿಯ ಐಎಎಸ್‌ ಅಧಿಕಾರಿಗಳಾದ ಮುನೀಶ್‌ ಮೌದ್ಗಿಲ್‌ ಅವರು ಶಿಕ್ಷಕರ ಕ್ಷೇತ್ರಕ್ಕೆ ಹಾಗೂ ಮೇಜರ್‌ ಮನಿವಣ್ಣನ್‌ ಅವರು ಪದವೀಧರರ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಚುನಾವಣಾ ಕರ್ತವ್ಯ ನಿಭಾಯಿಸಲು 254 ಪ್ರಿಸೈಡಿಂಗ್‌ ಆಫೀಸರ್‌, 1,016 ಪೊಲೀಂಗ್‌ ಆಫೀಸರ್‌, 278 ಮೈಕ್ರೋ ವೀಕ್ಷಕರು ಸೇರಿದಂತೆ ಒಟ್ಟು 1,548 ಮಂದಿಯನ್ನು ಅಣಿಗೊಳಿಸಲಾಗಿದೆ.

ಬೆಳಗಾವಿಯಲ್ಲಿ 95, ಬಾಗಲಕೋಟೆಯಲ್ಲಿ 48, ವಿಜಯಪುರದಲ್ಲಿ 47 ಸೇರಿ 190 ಮತಗಟ್ಟೆಗಳನ್ನು ತೆರೆಯಲಾಗಿದೆ. ಶಿಕ್ಷಕರ ಕ್ಷೇತ್ರದಲ್ಲಿ 25,388 ಹಾಗೂ ಪದವೀಧರ ಕ್ಷೇತ್ರದಲ್ಲಿ 99,598 ಮತದಾರರಿದ್ದಾರೆ. ಅರ್ಧದಷ್ಟು ಮತದಾರರು ಬೆಳಗಾವಿ ಜಿಲ್ಲೆಯಲ್ಲೇ ಇರುವ ಕಾರಣ ಈ ಒಂದೇ ಜಿಲ್ಲೆಯಲ್ಲಿ 95 ಮತಗಟ್ಟೆಗಳನ್ನು ತೆರೆಯಲಾಗಿದೆ.

23 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ

ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ಈ ಕ್ಷೇತ್ರದಲ್ಲಿ ತೀವ್ರ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಕಣ ಕುತೂಹಲ ಕೆರಳಿಸಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಎರಡೂ ಕ್ಷೇತ್ರಗಳಲ್ಲಿ ಸೆಡ್ಡು ಹೊಡೆದಿರುವ ಎಲ್ಲ 23 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ.

ಪದವೀಧರ ಕ್ಷೇತ್ರದಲ್ಲಿ 11 ಮಂದಿ: ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸುನೀಲ ಸಂಕ, ಬಿಜೆಪಿಯಿಂದ ಹಾಲಿ ಸದಸ್ಯ ಹಣಮಂತ ನಿರಾಣಿ, ಸರ್ವಜನತಾ ಪಕ್ಷದಿಂದ ಜಿ.ಸಿ.ಪಟೇಲ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಯಲ್ಲಪ್ಪ ಕಲಕುಟ್ರಿ, ಪಕ್ಷೇತರರಾಗಿ ಆದರ್ಶಕುಮಾರ ಪೂಜಾರಿ, ಘಟಿಗೆಪ್ಪ ಮಗದುಮ್ಮ, ದೀಪಿಕಾ ಎಸ್‌., ನಿಂಗಪ್ಪ ಭಜಂತ್ರಿ, ಭೀಮಸೇನ ಬಾಗಿ,
ರಾಜನಗೌಡ ಪಾಟೀಲ, ಸುಭಾಷ ಕೋಟೆಕಲ್‌ ಸ್ಪರ್ಧಿಸಿದ್ದಾರೆ.

12 ಮಂದಿ ಶಿಕ್ಷಕರ ಕಣದಲ್ಲಿ: ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸದಸ್ಯ ಅರುಣ ಶಹಾಪುರ, ಕಾಂಗ್ರೆಸ್‌ನಿಂದ ಪ್ರಕಾಶ ಹುಕ್ಕೇರಿ, ಜೆಡಿಎಸ್‌ನಿಂದ ಚಂದ್ರಶೇಖರ ಲೋಣಿ, ಪಕ್ಷೇತರ ಅಭ್ಯರ್ಥಿಗಳಾಗಿ ಎನ್‌.ಬಿ.ಬನ್ನೂರ, ಶ್ರೀನಿವಾಸಗೌಡ ಗೌಡರ, ಅಪ್ಪಾಸಾಹೇಬ ಕುರಣೆ, ಚಂದ್ರಶೇಖರ ಗುಡಸಿ, ಬಸಪ್ಪ ಮಣಿಗಾರ, ಶ್ರೀಕಾಂತ ಪಾಟೀಲ, ಶ್ರೇಣಿಕ್‌ ಜಾಂಗಟೆ, ಸಂಗಮೇಶ ಚಿಕ್ಕನರಗುಂದ, ಜಯಪಾಲ ದೇಸಾಯಿ ಸ್ಪರ್ಧಿಸಿದ್ದಾರೆ.

ಏನು ತರಬೇಕು, ಏನು ತರಬಾದು…

ಈ ಎರಡೂ ಕ್ಷೇತ್ರಗಳಿಗೆ ಮತ ಹಾಕುವವರು ಈಗಾಗಲೇ ನೋಂದಣಿ ಮಾಡಿಕೊಂಡ ಮತದಾರರ ಗುರುತಿನ ಚೀಟಿಯನ್ನು ತರಬೇಕು. ಒಂದು ವೇಳೆ ಮತದಾರರು ಗುರುತಿನ ಚೀಟಿ ಇಲ್ಲದಿದ್ದರೆ ಆಧಾರ್ ಕಾರ್ಡ್‌, ವಾಹನ ಚಾಲನಾ ಪರವಾನಗಿ ಪತ್ರ, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್‌, ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿದ ಸೇವಾ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯ ನೀಡಿದ ಪದವಿ ಅಥವಾ ಡಿಪ್ಲೊಮಾ ಪ್ರಮಾಣ ಪತ್ರದ ಮೂಲ ಪ್ರತಿ ಸೇರಿದಂತೆ ನಿಗದಿತ 10 ದಾಖಲೆಗಳಲ್ಲಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು. ಆದರೆ, ಚುನಾವಣೆಗೂ ಮುನ್ನವೇ ಇದೇ ಬಾರಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿರಬೇಕು. ಅಂಗವಿಕಲರು, ಅಂಧರು ಹಾಗೂ ಯಾವುದೇ ನ್ಯೂನತೆ ಹೊಂದಿದವರು ಸಂಬಂಧಪಟ್ಟ ಪ್ರಮಾಣ ಪತ್ರ ತೋರಿಸುವುದು ಕಡ್ಡಾಯ’ ಎಂದು ಪ್ರಾದೇಶಿಕ ಆಯುಕ್ತರೂ ಆದ ಚುನಾವಣಾಧಿಕಾರಿ ಆಮ್ಲಾನ್‌ ಆದಿತ್ಯ ಬಿಸ್ವಾಸ್‌ ತಿಳಿಸಿದ್ದಾರೆ.

ಮೊಬೈಲ್‌ ಒಯ್ಯುವಂತಿಲ್ಲ: ‘ಮತಗಟ್ಟೆಯಲ್ಲಿ ಮೊಬೈಲ್, ಡಿಜಿಟಲ್ ಪೆನ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣವನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: