fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Karnataka News

ಮೊಬೈಲ್‌ ಶೌಚಾಲಯ’ ನಿರ್ಮಿಸಿದ ಪಿಎಸ್‌ಐ ಶಾಂತಪ್ಪ ಜಡೆಮ್ಮನವರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಗೊರಗುಂಟೆಪಾಳ್ಯದಲ್ಲಿ ಜನರು ಅನುಭವಿಸುತ್ತಿರುವ ಶೌಚಾಲಯ ಸಮಸ್ಯೆ‌ ಬಗೆಹರಿಸುವಂತೆ 100 ದಿನ ನಿರಂತರವಾಗಿ ಅಭಿಯಾನ ನಡೆಸಿದರೂ ಬಿಬಿಎಂಪಿ ಅಧಿಕಾರಿಗಳು ಸ್ಪಂದಿಸದಿದ್ದರಿಂದ, ಪಿಎಸ್‌ಐ ಶಾಂತಪ್ಪ ಜಡೆಮ್ಮನವರ್ ಹಾಗೂ ತಂಡದವರು ತಮ್ಮ ಖರ್ಚಿನಲ್ಲೇ ‘ಮೊಬೈಲ್‌ ಶೌಚಾಲಯ’ ನಿರ್ಮಿಸಿ ಬಳಕೆಗೆ ಮುಕ್ತಗೊಳಿಸಿದ್ದಾರೆ.

 

ಗೊರಗುಂಟೆಪಾಳ್ಯದ ಬಸ್ ತಂಗುದಾಣಕ್ಕೆ‌ ಹೊಂದಿಕೊಂಡ ಜಾಗದಲ್ಲಿ ಮೊಬೈಲ್‌ ಶೌಚಾಲಯದ ವಾಹನ ನಿಲ್ಲಿಸಲಾಗಿದ್ದು, ಇದಕ್ಕೆ ಬೇಕಾದ ನೀರಿನ ವ್ಯವಸ್ಥೆಯೂ ವಾಹನದಲ್ಲಿದೆ.

ಬುಧವಾರ ಬೆಳಿಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ತೃತೀಯ ಲಿಂಗಿಯೊಬ್ಬರು ಶೌಚಾಲಯವನ್ನು ಉದ್ಘಾಟಿಸಿದರು. ತಮ್ಮನ್ನು ದೂರವಿಡಲು ಇಚ್ಛಿಸುವವರ‌ ನಡುವೆ ಇಂಥ ಕೆಲಸಕ್ಕೆ ಆಹ್ವಾನಿಸಿದ್ದಕ್ಕೆ ತೃತೀಯ ಲಿಂಗಿ ಭಾವುಕರಾದರು.

ವಾಹನದಲ್ಲಿ 10 ಶೌಚಗೃಹಗಳಿದ್ದು, ಗೊರಗುಂಟೆಪಾಳ್ಯ ತಂಗುದಾಣಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ ಇದರಿಂದ ಅನುಕೂಲ ಆಗಲಿದೆ. ಶೌಚಾಲಯ ತುಂಬಿದ‌ ನಂತರ, ಅದನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆಯಿದೆ. ಶೌಚಾಲಯ ನಿರ್ವಹಣೆ ಜವಾಬ್ದಾರಿಯನ್ನು ಕೆಲ ಸ್ವಯಂಸೇವಕರು ವಹಿಸಿಕೊಂಡಿದ್ದಾರೆ. ಪಿಎಸ್‌ಐ ಕೆಲಸಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಉತ್ತರ ಭಾರತದ ರಾಜ್ಯಗಳಿಂದ ಬೆಂಗಳೂರಿಗೆ ಬರುವ ವಾಹನಗಳು ಗೊರಗುಂಟೆಪಾಳ್ಯ ಮಾರ್ಗವಾಗಿ ಹಾದು ಹೋಗುತ್ತವೆ. ಪ್ರಯಾಣಿಕರು ಇಳಿಯುವ ಹಾಗೂ ಹತ್ತುವ ಪ್ರಮುಖ ಸ್ಥಳ ಇದಾಗಿದೆ. ಇಂಥ ಸ್ಥಳದಲ್ಲಿ ವ್ಯವಸ್ಥಿತ ಶೌಚಾಲಯ ಇಲ್ಲದಿದ್ದರಿಂದ, ಮಲ-ಮೂತ್ರ ವಿಸರ್ಜನೆಗಾಗಿ ಜನರು ಯಾತನೆ ಅನುಭವಿಸುತ್ತಿದ್ದರು’ ಎಂದು ಪಿಎಸ್‌ಐ ಶಾಂತಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮಹಿಳೆಯರು ಹಾಗೂ ವೃದ್ಧರು, ಮಲ ಹಾಗೂ ಮೂತ್ರ ವಿಸರ್ಜನೆಗಾಗಿ ಕಿ.ಮೀ.ಗಟ್ಟಲೇ ಹೋಗಬೇಕಾಗಿತ್ತು. ಕೆಲ ಪುರುಷರು, ರಸ್ತೆ ಬದಿಗಳಲ್ಲೇ ಮೂತ್ರ ವಿಸರ್ಜನೆ ಮಾಡಿ ಪರಿಸರವನ್ನು ಕಲುಷಿತಗೊಳಿಸುತ್ತಿದ್ದರು. ಇದರಿಂದಾಗಿ ತಂಗುದಾಣದಲ್ಲಿ ದುರ್ನಾತ ಬರುತ್ತಿತ್ತು. ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಿಲ್ಲುವ ಸ್ಥಿತಿಯೂ ಬಂದಿತ್ತು’ ಎಂದೂ ಹೇಳಿದರು.

‘ಗೊರಗುಂಟೆಪಾಳ್ಯ ತಂಗುದಾಣ ಬಳಿ ಶೌಚಾಲಯ ನಿರ್ಮಿಸಬೇಕೆಂದು ಒತ್ತಾಯಿಸಿ ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಯಾನ ಆರಂಭಿಸಲಾಗಿತ್ತು. ‘ಸ್ವಚ್ಛತೆಯೇ ಸ್ವರಾಜ್’ ಎನ್ನುವ ಗಾಂಧೀಜಿ ತತ್ವ ಹಾಗೂ ‘ಸ್ವಚ್ಛ ಭಾರತ’ ಧ್ಯೇಯದಡಿ 100 ದಿನ ಅಭಿಯಾನ ನಡೆಸಿ ಜಾಗ ಸೂಚಿಸಿದರೂ ಬಿಬಿಎಂಪಿ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸಲಿಲ್ಲ. ಹೀಗಾಗಿ, ಮೊಬೈಲ್ ಶೌಚಾಲಯ ನಿರ್ಮಿಸಿ ತಂದಿಟ್ಟಿದ್ದೇವೆ’ ಎಂದೂ ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: