fbpx
ನಾವು ಗೂಗಲ್ ಪ್ಲೇ ಸ್ಟೋರ್‌ನಲ್ಲಿ (FLASH 24/7) ಸುದ್ದಿಗಳ ಅಪ್ಲಿಕೇಶನ್ ಅನ್ನು ಹೊಂದಿದ್ದೇವೆ ನೀವು ದೈನಂದಿನ ಸುದ್ದಿಗಳಿಗಾಗಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು ಕೇವಲ ಕೆಲವೇ ಕೆಲವು ಕ್ಷಣದಲ್ಲಿ ಪಡೆಯಿರಿ ರಾಜ್ಯ,ರಾಷ್ಟ್ರ,ದೇಶ,ವಿದೇಶ,ರಾಜಕೀಯ, ಕ್ರೀಡೆ, ಸಿನೆಮಾ ಹೀಗೆ ಹತ್ತು ಹಲವು ಪ್ರಮುಖ ಸುದ್ದಿಗಳನ್ನ ಬರೀ ಒಂದು ಕ್ಲಿಕ್ ಮಾಡುವ ಮೂಲಕ.
Crime News

₹7.50 ಲಕ್ಷ ಮೌಲ್ಯದ ಚಿನ್ನಾಭರಣ ವಶ ಮಹಿಳೆ ಸೇರಿ ಇಬ್ಬರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

ಬೆಂಗಳೂರು: ಒಂಟಿ ಮಹಿಳೆಯರ ಜೊತೆ ಆತ್ಮೀಯವಾಗಿ ಮಾತನಾಡಿ, ಚಿನ್ನಾಭರಣ ಪಡೆದು ಪರಾರಿಯಾಗುತ್ತಿದ್ದ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸಜ್ಜದ್ ಮಹಮ್ಮದ್ ಅಲಿ (38) ಹಾಗೂ ಮಹಿಳೆ‌ ವೈತ್ಯಾಗಿ (40) ಬಂಧಿತರು.

ಇವರಿಂದ ₹ 7.50 ಲಕ್ಷ ಮೌಲ್ಯದ 202 ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಒಂದು ವಾಹನ ಸಜ್ಜದ್ ಹೆಸರಿನಲ್ಲಿದ್ದು, ಇನ್ನೊಂದು ವಾಹನದ ಮಾಲೀಕರು ಪತ್ತೆಯಾಗಿಲ್ಲ. ಈ ವಾಹನವನ್ನೂ ಆರೋಪಿಗಳು ಕಳ್ಳತನ ಮಾಡಿರುವ ಅನುಮಾನವಿದೆ’ ಎಂದು ಪೊಲೀಸರು ಹೇಳಿದರು.

‘ಬಸವೇಶ್ವರನಗರದಲ್ಲಿರುವ ಡ್ರೈ ಪ್ರೂಟ್ಸ್ ಅಂಗಡಿಯೊಂದಕ್ಕೆ ಮೇ 21ರಂದು ಗ್ರಾಹಕರ ಸೋಗಿನಲ್ಲಿ ಹೋಗಿದ್ದ ಆರೋಪಿಗಳು, ಅಲ್ಲಿದ್ದ ಒಂಟಿ ಮಹಿಳೆಯನ್ನು ಆತ್ಮೀಯವಾಗಿ ಮಾತನಾಡಿಸಿದ್ದರು. ತಮ್ಮ ಚಿನ್ನಾಭರಣ ಅಂಗಡಿ ಇರುವುದಾಗಿಯೂ ಹೇಳಿದ್ದರು. ಮಹಿಳೆ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ನೋಡಿ, ವಿನ್ಯಾಸ ಚೆನ್ನಾಗಿದೆ ಎಂದು ಹೊಗಳಿದ್ದರು.’

‘ಮಾಂಗಲ್ಯ ಸರದ ಫೋಟೊ ಕ್ಲಿಕ್ಕಿಸಿಕೊಂಡಿದ್ದ ಆರೋಪಿ ವೈತ್ಯಾಗಿ, ‘ಇಂಥದ್ದೇ ಸರ ಮಾಡಿಸಬೇಕಿದೆ. ನಮ್ಮ ಮಳಿಗೆ ಕೆಲಸಗಾರನಿಗೆ ತೋರಿಸಿಕೊಂಡು ಬರುತ್ತೇನೆ’ ಎಂಬುದಾಗಿ ಹೇಳಿದ್ದರು. ಅದನ್ನು ನಂಬಿದ್ದ ದೂರುದಾರ ಮಹಿಳೆ, ಸರ ಕೊಟ್ಟು ಕಳುಹಿಸಿದ್ದರು. ಆದರೆ, ಆರೋಪಿ ವಾಪಸು ಬಂದಿರಲಿಲ್ಲ. ನಂತರವೇ ಠಾಣೆಗೆ ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಒಂಟಿ ಮಹಿಳೆಯರು ಇರುತ್ತಿದ್ದ ಅಂಗಡಿಗಳನ್ನೇ ಗುರಿಯಾಗಿಸಿಕೊಂಡು ಆರೋಪಿಗಳು ಕೃತ್ಯ ಎಸಗುತ್ತಿದ್ದರು. ನಂದಿನಿ ಲೇಔಟ್, ವಿಜಯನಗರ, ಜಾಲಹಳ್ಳಿ ಹಾಗೂ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಚಿನ್ನಾಭರಣ ಕದ್ದಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US
ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ Independent journalism can't be independent without your support, contribute by clicking below. PLEASE DONATE-AND- SUPPORT US

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published.

error: Content is protected !!
%d bloggers like this: