Karnataka News
ಬೆಳ್ಳಂಬೆಳಗ್ಗೆ `ACB’ ಶಾಕ್ : ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಎಸಿಬಿ ಅಧಿಕಾರಿಗಳು ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಹಾಸನದಲ್ಲಿ ಎಇಇ ರಾಮಕೃಷ್ಣ ಮನೆ, ಕಚೇರಿ ಸೇರಿ 3 ಕಡೆ ಇಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾನಗರ ನಿವಾಸ, ಹಿಸಾವೆ ನಿವಾಸ ಹಾಗೂ ಕುವೆಂಪು ನಗರದ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀನಲನೆ ನಡೆಸಿದ್ದಾರೆ.
ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರ್ ಗೋಗಿ ಮನೆ, ಕಚೇರಿಗಳ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.