Karnataka News
ಮಳಲಿ ಮಸೀದಿ ವಿವಾದ ಪ್ರಕರಣ: ಜೂ. 20ಕ್ಕೆ ವಿಚಾರಣೆ ಮುಂದೂಡಿಕೆ

ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಜೂ. 20ಕ್ಕೆ ಮುಂದೂಡಿದೆ.
ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದರೂ ಆದೇಶ ನೀಡುವಂತಿಲ್ಲ ಎಂದು ಹೈಕೋರ್ಟ್ ನಿರ್ದೇಶ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಆದೇಶದ ಅನಂತರವೇ ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ನಿರ್ಧಾರವಾಗಿತ್ತು.
ಹೈಕೋರ್ಟ್‌ನಲ್ಲಿ ಶುಕ್ರವಾರಕ್ಕೆ ನಿಗದಿಯಾಗಿದ್ದ ವಿಚಾರಣೆ ನಡೆದಿಲ್ಲ. ಹಾಗಾಗಿ ಮಂಗಳೂರಿನ ಸಿವಿಲ್ ಕೋರ್ಟ್ ಕೂಡ ವಿಚಾರಣೆಯ ದಿನಾಂಕವನ್ನು ಮುಂದೂಡಿದೆ.