SSLC ಪೂರಕ ಪರೀಕ್ಷೆ’ಗೆ ಕೋವಿಡ್ ಮಾರ್ಗಸೂಚಿ ರಿಲೀಸ್: ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಈ ನಡುವೆಯೂ ದಿನಾಂಕ 27-06-2022ರಿಂದ 04-07-2022ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ( SSLC Supplementary Exam ) ನಿಗದಿ ಪಡಿಸಲಾಗಿದೆ.
ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯನ್ನು ಇದೇ ಜೂನ್ 27, 2022ರಿಂದ ದಿನಾಂಕ 04-07-2022ರವರೆಗೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ, ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ದಿನಾಂಕ 14-03-2022ರಂದು ಹೊರಡಿಸಲಾಗಿರುವಂತ ಎಸ್‌ಓಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಸಿಇಓಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆದೇಶಿಸಿದ್ದಾರೆ.
ಹೀಗಿದೆ ಎಸ್ ಎಸ್ ಎಲ್ ಸಿ ಪೂರಕ ಕೋವಿಡ್ ನಿಯಂತ್ರಣ ಕ್ರಮಗಳು
- ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು
- ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು
- ದೈಹಿಕ ಅಂತರ ಕಾಪಾಡುವುದು
- ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡುವುದು.
- ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು
- ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು
- ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು
- ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು.
- ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು
- ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು