ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು, ಜೂನ್ 20; ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕರ್ನಾಟಕ ಪ್ರವಾಸ ಸೋಮವಾರ ಆರಂಭವಾಗಲಿದೆ.
ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿರುವ ಮೋದಿ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರಿನ ಯಲಹಂಕ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಆಗಮಿಸಲಿದ್ದಾರೆ. ಮೋದಿ ಸ್ವಾಗತಿಸಲು ಕರ್ನಾಟಕದ ಬಿಜೆಪಿ ನಾಯಕರು ಸಿದ್ಧವಾಗಿದ್ದಾರೆ. ಮೋದಿ ಆಗಮನದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ನರೇಂದ್ರ ಮೋದಿ ಸೋಮವಾರ ಸಂಜೆಯ ತನಕ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.
ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮೈಸೂರಿಗೆ ತೆರಳಲಿದ್ದಾರೆ. ಸುತ್ತೂರು ಮಠಕ್ಕೆ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ರಾತ್ರಿ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ವಿಶ್ವ ಯೋಗ ದಿನದ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿಯ ವಿವರ, ಕಾರ್ಯಕ್ರಮ, ಫೋಟೋ, ವಿಡಿಯೋಗಳು ಈ ಲೈವ್ ಪುಟದಲ್ಲಿ ನಿಮಗೆ ಸಿಗಲಿವೆ…