Karnataka News
28 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

28 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಪೂಜೆ ನೆರವೇರಿಸಿದರು.
ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ 28 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿರುವ ಹೆಬ್ಬಾಳಕರ್, ಗ್ರಾಮಸ್ಥರ ಸಮ್ಮುಖದಲ್ಲಿ ಕಾಮಗಾರಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜಣ್ಣ ಕದಂ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಿರ್ಮಲಾ ಕಲಕಾಂಬ್ಕರ್, ಸದಸ್ಯರುಗಳಾದ ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮಲ್ಲಪ್ಪ ಸುಳಗೇಕರ್, ರಾಜಶ್ರೀ ಕೋಲಕಾರ, ದೀಪಾ ತೋರೆ, ಸುನಿಲ ಔಡನ್, ರಾಜು ಸಾವಗಾಂವ್ಕರ್, ಅಮೃತ ತುಪ್ಪಟ್, ಗಣೇಶ ಈರಮ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.