48 ಲಕ್ಷ ರೂ. ವೆಚ್ಚದಲ್ಲಿ ಜಲಜೀವನ್ ಮಿಷನ್ : ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

48 ಲಕ್ಷ ರೂ. ವೆಚ್ಚದಲ್ಲಿ ಜಲಜೀವನ್ ಮಿಷನ್ : ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ –
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕವಳೆವಾಡಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮ ಮನೆ ಮನೆಗೆ ನಲ್ಲಿಯ ಮೂಲಕ ನೀರು ಪೂರೈಸುವ ಈ ಯೋಜನೆಗೆ 48 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು, ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಲಕ್ಷ್ಮೀ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚಿಸಿದರು. ಕಾಮಗಾರಿ ಸಂದರ್ಭದಲ್ಲಿ ರಸ್ತೆಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲು ಸಹ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷರಾದ ಯುವರಾಜ ಕದಂ, ಮನೋಹರ ಬೆಳಗಾಂವ್ಕರ, ನಾಮದೇವ ಮೋರೆ, ಮಹೇಶ ಪಾಟೀಲ, ಮನಿಷಾ ಸುತಾರ, ಮಂಗಲ ಜಾಧವ್, ಜ್ಯೋತಿಭಾ ಮೋರೆ, ಕಲ್ಲಪ್ಪ ಯಳ್ಳೂರಕರ್, ಶಿವಾಜಿ ಜಾಧವ್, ಪುಂಡಲೀಕ ಜಾಧವ್, ಅನಂತ ಬಾಚಿಕರ್, ಗುತ್ತಿಗೆದಾರರಾದ ರಾಮ ಪಾಟೀಲ, ಇಂಜಿನಿಯರ್ ಮೆಹಬೂಬ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.