ಸಾಂಬ್ರಾದಲ್ಲಿ ಹಲವು ಅಭಿವೃದ್ಧಿ ಯೋಜನೆ: ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಸಾಂಬ್ರಾದಲ್ಲಿ ಹಲವು ಅಭಿವೃದ್ಧಿ ಯೋಜನೆ: ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಸಾಂಬ್ರಾದಲ್ಲಿ ಹಲವು ಯೋಜನೆಗಳಿಗೆ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಸಾಂಬ್ರಾ ಗ್ರಾಮದ ಸರ್ಕಾರಿ ಪ್ರೌಢಶಾಲಾ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗಳಿಗೆ ಶಾಸಕರು ಪೂಜೆಯನ್ನು ನೆರವೇರಿಸಿ ಚಾಲನೆಯನ್ನು ನೀಡಿದರು.
ಕ್ಷೇತ್ರದ ಜನರ ಸಹಕಾರದಿಂದಾಗಿ ಸಾವಿರಾರು ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿ ತರಲು ಸಾಧ್ಯವಾಗಿದೆ. ಜನರ ಸಹಕಾರವಿಲ್ಲದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಇಲ್ಲಿನ ಜನರ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ನಾನು ಸದಾ ಋುಣಿಯಾಗಿರುವೆ. ಇನ್ನೂ ಹಲವಾರು ಬೃಹತ್ ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಹೆಬ್ಬಾಳಕರ್ ಹೇಳಿದರು.
ನಾನೇನು ದೊಡ್ಡ ಮನುಷ್ಯಳಲ್ಲ. ಆದರೆ ಸತತ ಪರಿಶ್ರಮದಿಂದ ಈ ಸ್ಥಾನಕ್ಕೆ ಬಂದಿರುವೆ. ನನ್ನಂತ ಸಾವಿರಾರು ಜನರು ಇಲ್ಲಿದ್ದಾರೆ. ಅವರೆಲ್ಲ ಮುಂದೆ ಬರಬೇಕೆನ್ನುವುದು ನನ್ನ ಅಪೇಕ್ಷೆ. ಅದಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡಲು ನಾನು ಸಿದ್ದಳಿದ್ದೇನೆ ಎಂದೂ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ನಾಗೇಶ ದೇಸಾಯಿ, ಬಸು ದೇಸಾಯಿ, ಈರಪ್ಪ ಸುಳೇಭಾವಿ, ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಸದು ಪಾಟೀಲ, ಶಂಕರಗೌಡ ಪಾಟೀಲ, ಸುಲೋಚನಾ ಜೋಗಾಣಿ, ಶ್ವೇತಾ ಬಂಜ್ಮನವಾಡಿ, ಶಾಂತಾ ದೇಸಾಯಿ, ಆಶಾ ಮಾಣೆ, ಶಕೀಲಾ ಬಾಗೇವಾಡಿ, ಖಯುಮ್ ಅತ್ತಾರ, ಸಂತೋಷ ಕೇಸಾದಂ, ಪ್ರಕಾಶ ಚೌಗುಲೆ, ಪ್ರಶಾಂತ ಗಿರಿಮಲ್ಲಿ, ಮಹೇಶ ಕುಲಕರ್ಣಿ, ಲಕ್ಷ್ಮಣ ಕೋಳಪ್ಪಗೋಳ, ವೀರುಪಾಕ್ಷಿ ಕೋಲಕಾರ, ಪ್ರವೀಣ ಮಾಣೆ, ಮಹೇಂದ್ರ ಘೋಡೆ, ಬಾವುಕಣ್ಣ ಬಸರೀಕಟ್ಟಿ, ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
78 ಲಕ್ಷ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಸಾಂಬ್ರಾ ಗ್ರಾಮದ ಗಣೇಶ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ 50 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿ, ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿದರು.
ನಂತರ ಮಾರುತಿ ನಗರದ ಕಾಂಕ್ರೀಟ್ ಚರಂಡಿ ನಿರ್ಮಾಣಕ್ಕಾಗಿ ಪಂಚಾಯತ ರಾಜ ಇಂಜಿನಿಯರಿಂಗ್ ಇಲಾಖೆಯ ಅನುದಾನದಲ್ಲಿ 28 ಲಕ್ಷ ರೂ,ಗಳು ಮಂಜೂರಾಗಿದ್ದು, ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.