Karnataka News
`8 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಗೆ ಪ್ರಧಾನಿ ಮೋದಿ ಚಾಲನೆ

ಮೈಸೂರು : 8 ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿದ್ದಾರೆ.
ಮೈಸೂರು ಅರಮನೆ ಆವರಣದಲ್ಲಿ ಯೋಗಕ್ಕಾಗಿ ಬೃಹತ್ ವೇದಿಕೆ ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಜೊತಗೆ 15 ಸಾವಿರ ಜನ ಯೋಗ ಮಾಡಲಿದ್ದು, ಇದರಲ್ಲಿ 1,200 ವಿದ್ಯಾರ್ಥಿಗಳಿದ್ದಾರೆ. 45 ನಿಮಿಷ ನಡೆಯುವ ಕಾರ್ಯಕ್ರಮದಲ್ಲಿ 19 ಆಸನಗಳು ಪ್ರದರ್ಶನಗೊಳ್ಳಲಿವೆ. ಪ್ರಧಾನಿ ಮೋದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ.
ಬೆಳಗ್ಗೆ 6.30 ರಿಂದ ಅರಮನೆ ಮೈದಾನದಲ್ಲಿ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮ ಆರಂಭವಾಗಿದ್ದು, ಮೊದಲಿಗೆ ಕೇಂದ್ರ ಆಯುಷ್ ಸಚಿವರು, ಸಿಎಂ ಬಸವರಾಜ ಬೊಮ್ಮಾಯಿ ತಲಾ 5 ನಿಮಿಷ ಮಾತನಾಡಲಿದ್ದಾರೆ. ಬಳಿಕ 20 ನಿಮಿಷ ಪ್ರಧಾನಿ ನರೇಂದ್ರ ಮೋದಿ ಯೋಗ ಸಂದೇಶ ನೀಡಲಿದ್ದಾರೆ. ಬಳಿಕ 7 ಗಂಟೆಯಿಂದ 7.45 ರವರೆಗೆಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.