National
ವಿಚಾರಣೆಗೆ ಹಾಜರಾಗದ ನೂಪುರ್ ಶರ್ಮಾ

ಕೋಲ್ಕತ್ತ: ಪ್ರವಾದಿ ಮಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಸೋಮವಾರ ವಿಚಾರಣೆಗೆ ಹಾಜರಾಗಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
‘ತಮ್ಮ ಮೇಲೆ ದಾಳಿ ನಡೆಯಬಹುದು ಎಂಬ ಕಾರಣ ನೀಡಿರುವ ಅವರು, ವಿಚಾರಣೆಗೆ ಹಾಜರಾಗಲು ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಇ-ಮೇಲ್ ಮೂಲಕ ಕೋರಿಕೊಂಡಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.
ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಅವರ ವಿರುದ್ಧ ಸ್ಥಳೀಯ ನಿವಾಸಿಯೊಬ್ಬರು ಪಶ್ಚಿಮ ಬಂಗಾಳದ ನರ್ಕೆಲ್‌ದಂಗ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೂಪುರ್ ಅವರಿಗೆ ನೋಟಿಸ್ ನೀಡಲಾಗಿತ್ತು.