Karnataka News
ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ

ಬೆಳಗಾವಿ: ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ್ ಫಕೀರೇಶ ಅಗಡಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇಂದು ಸ್ವೀಕರಿಸುತ್ತಿದ್ದ 20 ಸಾವಿರ ರೂ. ಹಾಗೂ ನಿನ್ನೆ ಸ್ವೀಕರಿಸಿದ್ದ 10 ಸಾವಿರ ರೂ. ವಶಪಡಿಸಿಕೊಳ್ಳಲಾಗಿದೆ.
ಫಕಿರೇಶ ಅಗಡಿಯನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ಬಳಿಕ ಅವರ ಮನೆ ಮೇಲೂ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ 3.91 ಲಕ್ಷ ರೂ ನಗದು ಹಣ ವಶಕ್ಕೆ ಪಡೆದಿದ್ದಾರೆ. ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಎಸಿಬಿ ಇನಸ್ಪೆಕ್ಟರ್ ಕರುಣಾಕರ ಶೆಟ್ಟಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ನಗರದ ಅನಗೋಳದ ಮೊನೇಶ್ವರ ಅಪ್ಪಣ್ಣ ಕಮ್ಮಾರ ಎಂಬುವವರು ಎಸಿಬಿಗೆ ದೂರು ನೀಡಿದ್ದರು.