Karnataka News
BREAKING NEWS : ಬೆಳ್ಳಂಬೆಳಗ್ಗೆ ಕರ್ನಾಟಕ, ಆಂಧ್ರಪ್ರದೇಶದ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು : ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶಗಳಲ್ಲಿ ಖಾಸಗಿ ವಿಶ್ವವಿದ್ಯಾಲಯಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಹಲವು ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿದಂತೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 70 ವಾಹನಗಳಲ್ಲಿ ಐಟಿ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದಾರೆ.
ಕರ್ನಾಟಕ, ಗೋವಾದ ಐಟಿ ಅಧಿಕಾರಿಗಳು ಕರ್ನಾಟಕ, ಆಂಧ್ರಪ್ರದೇಶದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.